}

ಬಕ್ರೀದ್ ಕುರ್ಬಾನಿಗೆ ಪೊಲೀಸ್ ರಕ್ಷಣೆ ನೀಡಿ: ಗೃಹ ಸಚಿವರಿಗೆ ಮೌಲನಾ ಶಾಫಿ ಸ-ಅದಿ ಮನವಿ

suddilive.com
By -
0

 

Maulana Shafi Sadi requests police protection for Bakrid Qurbani in Karnataka

ಬೆಂಗಳೂರು: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನುಬದ್ಧವಾಗಿ ನಡೆಯುವ ಕುರ್ಬಾನಿ (ಬಲಿಕರ್ಮ) ಕಾರ್ಯಗಳಿಗೆ ಪೊಲೀಸ್ ರಕ್ಷಣೆ ಒದಗಿಸಬೇಕು ಹಾಗೂ ಕಾನೂನು ಕೈಗೆತ್ತಿಕೊಂಡು ಸಮಾಜದಲ್ಲಿ ಭೀತಿ ಮತ್ತು ಅಶಾಂತಿ ಸೃಷ್ಟಿಸುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲನಾ ಶಾಫಿ ಸ-ಅದಿ ಅವರು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ.


ಈ ಕುರಿತು ಮೇ 20ರಂದು ಗೃಹ ಸಚಿವರಿಗೆ ಪತ್ರ ಬರೆದಿರುವ ಮೌಲನಾ ಶಾಫಿ ಸ-ಅದಿ ಅವರು, ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯುವ ಕಾನೂನುಬದ್ಧ ಬಲಿಕರ್ಮ ಹಲವು ದಶಕಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಶಾಂತಿಯುತವಾಗಿ ನಡೆದುಬರುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಲವು ಸಂಘಟಿತ ದುರುಳರು ಮತ್ತು ಸಮಾಜದ ಸಾಮರಸ್ಯ ಹಾಳು ಮಾಡುವ ಶಕ್ತಿಗಳು ಸಾಮಾಜಿಕ ಜಾಲತಾಣಗಳು ಹಾಗೂ ನೇರ ಬೆದರಿಕೆಗಳ ಮೂಲಕ ಮುಸ್ಲಿಂ ಸಮುದಾಯದಲ್ಲಿ ಆತಂಕ ಸೃಷ್ಟಿಸುವ ಪ್ರಯತ್ನ ನಡೆಸುತ್ತಿರುವುದು ಚಿಂತಾಜನಕ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.


ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕುಗಳಿಗೆ ಯಾವುದೇ ಧಕ್ಕೆ ಉಂಟಾಗಬಾರದು. ಸಂವಿಧಾನಬದ್ಧ ಹಕ್ಕಿನಡಿ ನಡೆಯುವ ಧಾರ್ಮಿಕ ಆಚರಣೆಗಳಿಗೆ ಸರ್ಕಾರ ಸಂಪೂರ್ಣ ರಕ್ಷಣೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮತ್ತು ಗೃಹ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.


ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನುಬದ್ಧವಾಗಿ ನಡೆಯುವ ಬಲಿಕರ್ಮಕ್ಕೆ ಪೊಲೀಸ್ ಭದ್ರತೆ ಮತ್ತು ಆಡಳಿತಾತ್ಮಕ ಸಂರಕ್ಷಣೆ ಒದಗಿಸಬೇಕು. ಕಾನೂನು ಕೈಗೆತ್ತಿಕೊಂಡು ಬೆದರಿಕೆ, ದೌರ್ಜನ್ಯ, ವಾಹನ ತಡೆ, ದಾಳಿ ಅಥವಾ ಸಾಮಾಜಿಕ ಅಶಾಂತಿ ಸೃಷ್ಟಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.


ಇದೇ ವೇಳೆ ರಾಜ್ಯದ ಎಲ್ಲಾ ಪೊಲೀಸ್ ಇಲಾಖೆಗಳಿಗೆ ಸ್ಪಷ್ಟ ಸರ್ಕ್ಯುಲರ್ ಜಾರಿ ಮಾಡಿ, ನಿರಪರಾಧಿಗಳಿಗೆ ಅನಗತ್ಯ ಕಿರುಕುಳ ನೀಡದಂತೆ ಸೂಚನೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭರಿತ, ಸುಳ್ಳು ಮಾಹಿತಿ ಹಾಗೂ ಪ್ರಚೋದನಾತ್ಮಕ ಸಂದೇಶಗಳನ್ನು ಹಂಚುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


ಎಲ್ಲಾ ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಗೌರವಿಸುವುದು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸ್ಪಷ್ಟ ಸಾರ್ವಜನಿಕ ಹೇಳಿಕೆ ನೀಡಿ ಜನರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೌಲನಾ ಶಾಫಿ ಸ-ಅದಿ ಅವರು, ಪತ್ರದ ಜೊತೆಗೆ ದೂರವಾಣಿ ಮೂಲಕವೂ ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ಪೊಲೀಸ್ ಇಲಾಖೆಗೆ ಅಗತ್ಯ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default