ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋಹತ್ಯೆ ಅಡ್ಡೆಯ ಮೇಲೆ ಬಂಟ್ವಾಳ ನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಭಾರಿ ಪ್ರಮಾಣದ ಮಾಂಸ, ಜೀವಂತ ಜಾನುವಾರುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಸಜಿಪಮೂಡ ನಿವಾಸಿ ಮುಸ್ತಾಪ (33) ಮತ್ತು ಬಂಟ್ವಾಳ ಬಿ. ಕಸಬಾ ನಿವಾಸಿ ಮಹಮ್ಮದ್ ಸಾದೀಕ್ (30) ಎಂದು ಗುರುತಿಸಲಾಗಿದೆ.
ಮೇ 27ರಂದು ತಡರಾತ್ರಿ ಪಂಜಾಜೆಯ ಮನೆಯೊಂದರ ಹಿಂಬದಿಯ ಕೊಟ್ಟಿಗೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಲಾಗುತ್ತಿದೆ ಎಂಬ ನಿಖರ ಮಾಹಿತಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪಿಎಸ್ಐ ಅವರು ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಕಾನೂನುಬಾಹಿರವಾಗಿ ಜಾನುವಾರನ್ನು ವಧೆ ಮಾಡಿ ಮಾಂಸ ಕತ್ತರಿಸುತ್ತಿರುವುದು ರಂಗೇ ರಂಗಾಗಿ ಪತ್ತೆಯಾಗಿದೆ.
ಪೊಲೀಸರು ದಾಳಿ ನಡೆಸಿದ ಸ್ಥಳದಲ್ಲಿ ಈಗಾಗಲೇ ವಧೆ ಮಾಡಲಾಗಿದ್ದ ಒಂದು ಜಾನುವಾರಿನ ಮಾಂಸ, ಕೃತ್ಯಕ್ಕೆ ಬಳಸುತ್ತಿದ್ದ ಆಯುಧಗಳು ಹಾಗೂ ಸಲಕರಣೆಗಳನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಅಡ್ಡೆಯಲ್ಲಿದ್ದ 6 ಜೀವಂತ ಜಾನುವಾರುಗಳನ್ನು ರಕ್ಷಿಸಲಾಗಿದ್ದು, ಸಾಗಾಟಕ್ಕೆ ಬಳಸುತ್ತಿದ್ದ ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳೊಂದಿಗೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/2026ರಂತೆ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7, 12ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಹಾಗೂ ತನಿಖೆ ಮುಂದುವರಿದಿದೆ
.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

