ಬೆಳಗಾವಿ ನಗರದ ಅಜಂ ನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ನಿವಾಸಿಯಾದ 21 ವರ್ಷದ ಕಾವೇರಿ ಉಮೇಶ ನಾಯಕ ಮೃತಪಟ್ಟ ದುರ್ದೈವಿ. ಈಕೆ ನಗರದ ಕಾಲೇಜೊಂದರಲ್ಲಿ ಬಿಎಸ್‌ಸಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸಕ್ಕಾಗಿ ವಸತಿ ನಿಲಯದಲ್ಲಿ ನೆಲೆಸಿದ್ದರು.
ವಿಶೇಷವೆಂದರೆ ಸೋಮವಾರ ಕಾವೇರಿ ಅವರ ಜನ್ಮದಿನವಾಗಿದ್ದು, ಹುಟ್ಟಿದ ಹಬ್ಬದಂದೇ ಅವರು ಇಂತಹ ಕಠಿಣ ನಿರ್ಧಾರ ಕೈಗೊಂಡಿರುವುದು ಕುಟುಂಬ ಸದಸ್ಯರು ಹಾಗೂ ಸಹಪಾಠಿಗಳಲ್ಲಿ ತೀವ್ರ ಆಘಾತ ಮೂಡಿಸಿದೆ. ಕೇವಲ ಮೂರು ತಿಂಗಳ ಹಿಂದಷ್ಟೇ ಕಾವೇರಿ ಅವರಿಗೆ ಪೊಲೀಸ್ ಪೇದೆಯೊಬ್ಬರ ಜೊತೆ ನಿಶ್ಚಿತಾರ್ಥ ನೆರವೇರಿತ್ತು. ಶೀಘ್ರದಲ್ಲೇ ಮದುವೆ ನಡೆಯಬೇಕಿದ್ದ ಸಂಭ್ರಮದ ನಡುವೆಯೇ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ವಸತಿ ನಿಲಯದ ಕೊಠಡಿಯಲ್ಲಿ ಮೃತದೇಹವನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲವಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

