ಬೆಳ್ತಂಗಡಿ, ಮೇ 28: ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತರಿಂದ ಸುಮಾರು 40 ಸಾವಿರ ರೂ. ಮೌಲ್ಯದ 4 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ತನ್ವೀರ್ (27) ಹಾಗೂ ಮೂಡಬಿದಿರೆ ತಾಲೂಕಿನ ಕಲ್ಲಬೆಟ್ಟು ನಿವಾಸಿ ಮುಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಕಾರಿನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿರುವ ಕುರಿತು ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು.
ಈ ಮಾಹಿತಿಯ ಆಧಾರದಲ್ಲಿ ಮೇ 27ರಂದು ಕಂಬಳದಡ್ಡ ಸಮೀಪದ ಗುರುವಾಯನಕೆರೆ–ಮೂಡಬಿದಿರೆ ರಸ್ತೆಯಲ್ಲಿ ಪೊಲೀಸರು ನಾಖಾಬಂದಿ ಹಾಕಿ ವಾಹನ ತಪಾಸಣೆ ನಡೆಸಿದರು. ಈ ವೇಳೆ KA-13-P-2905 ಸಂಖ್ಯೆಯ ಐ20 ಕಾರನ್ನು ತಡೆದು ಪರಿಶೀಲಿಸಿದಾಗ, ಮಾರಾಟ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿದ್ದ 4 ಗ್ರಾಂ ಎಂಡಿಎಂಎ ಮಾದಕವಸ್ತು ಪತ್ತೆಯಾಗಿದೆ.
ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗಳು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಹಂಝತ್ ಕರಾರ್ ಎಂಬಾತನಿಂದ ಮಾದಕವಸ್ತು ಪಡೆದು ಮಾರಾಟಕ್ಕೆ ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಝತ್ ಕರಾರ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.
ಬಂಧಿತ ಆರೋಪಿಗಳನ್ನು ಮೇ 28ರಂದು ಮಂಗಳೂರು ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪರಾರಿಯಾಗಿರುವ ಮೂರನೇ ಆರೋಪಿ ಹಂಝತ್ ಕರಾರ್ ಬಂಧನಕ್ಕಾಗಿ ವೇಣೂರು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಜಿಲ್ಲೆಯಾದ್ಯಂತ ಮಾದಕವಸ್ತು ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

