}

ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು; ರಾತ್ರಿ ವೇಳೆ ಮೃತದೇಹ ಪತ್ತೆ

suddilive.com
By -
0

 

beltangady-pajiradka-netravati-river-engineering-student-drowned

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜೀರಡ್ಕದ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಗಳ ತಂಡದ ದುರ್ಘಟನೆಯಲ್ಲಿ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಮೇ 19 ರಂದು ಸಂಜೆ ಸಂಭವಿಸಿದೆ.


ಮೃತ ವಿದ್ಯಾರ್ಥಿಯನ್ನು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿಯಾಗಿರುವ ಹಾಗೂ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ (ಈಸಿಎ) ವ್ಯಾಸಂಗ ಮಾಡುತ್ತಿದ್ದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಇವರು ತಮ್ಮ ಆರು ಮಂದಿ ಸ್ನೇಹಿತರೊಂದಿಗೆ ಸೇರಿ ಒಟ್ಟು ಏಳು ಜನರ ತಂಡವಾಗಿ ಸಂಜೆ ವೇಳೆಯಲ್ಲಿ ಪಜೀರಡ್ಕದ ನೇತ್ರಾವತಿ ನದಿಗೆ ಈಜಲು ತೆರಳಿದ್ದರು ಎಂದು ತಿಳಿದುಬಂದಿದೆ.


ಈಜುತ್ತಿದ್ದ ವೇಳೆ ಆಕಸ್ಮಿಕವಾಗಿ ಶ್ರೀಪೂರ್ಣ ಅವರು ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಸ್ನೇಹಿತರು ಮತ್ತು ಸ್ಥಳೀಯರು ಅವರನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಘಟನೆ ಕುರಿತು ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಪಡೆಗೆ ಮಾಹಿತಿ ನೀಡಿದ್ದಾರೆ.


ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಮತ್ತು ಶೌರ್ಯ ತಂಡಗಳು ರಾತ್ರಿ ತನಕ ಶೋಧ ಕಾರ್ಯಾಚರಣೆ ನಡೆಸಿದ್ದು, ರಾತ್ರಿ ಸುಮಾರು 9:40ರ ವೇಳೆಗೆ ಶ್ರೀಪೂರ್ಣ ಅವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಬಳಿಕ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.


ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default