}

ಬೆಳ್ತಂಗಡಿ ದಿಡುಪೆ ಜಲಪಾತದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಕೇರಳ ಮೂಲದ ಮೂವರು ಯುವಕರ ಬಂಧನ

suddilive.com
By -
0

 

belthangady-didupe-waterfalls-harassment-case

ಬೆಳ್ತಂಗಡಿ : ತಾಲೂಕಿನ ದಿಡುಪೆ ಜಲಪಾತದಲ್ಲಿ ಮೂವರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ಮೂಲದ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20ರಂದು ಪ್ರವಾಸಕ್ಕಾಗಿ ದಿಡುಪೆ ಜಲಪಾತಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ಬಂಧಿತ ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂದು ಗುರುತಿಸಲಾಗಿದೆ. ಯುವತಿಯರೊಂದಿಗೆ ಪ್ರವಾಸಕ್ಕೆ ಬಂದಿದ್ದ ಈ ಮೂವರು ಯುವಕರು, ಜಲಪಾತದ ಬಳಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.


ಘಟನೆಯ ವೇಳೆ ಯುವತಿಯರು ಪ್ರತಿರೋಧ ವ್ಯಕ್ತಪಡಿಸಿ ಜೋರಾಗಿ ಕೂಗಿಕೊಂಡಿದ್ದಾರೆ. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಮಧ್ಯಪ್ರವೇಶಿಸಿ ಆರೋಪಿಗಳನ್ನು ಹಿಡಿದುಕೊಂಡು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯರನ್ನು ಸುರಕ್ಷಿತವಾಗಿ ರಕ್ಷಿಸಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

www.suddilive.com

ನೊಂದ ಯುವತಿಯರು ನೀಡಿದ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಳಸುತ್ತಿದ್ದ ಸ್ವಿಫ್ಟ್ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default