ಕಡಬ: ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತ (21) ಎಂದು ಗುರುತಿಸಲಾಗಿದೆ.
ಬೇಸಿಗೆ ರಜೆಯ ಮಜಾ ಕಳೆಯಲು ಐವರು ವಿದ್ಯಾರ್ಥಿನಿಯರ ತಂಡವು ಗುಂಡ್ಯ ಹೊಳೆಯ ಕೊಲ್ಯದಕಟ್ಟ ಅಣೆಕಟ್ಟು ಸಮೀಪಕ್ಕೆ ಬಂದಿತ್ತು. ಸ್ನಾನಕ್ಕಾಗಿ ನದಿಗೆ ಇಳಿದಿದ್ದಾಗ, ನೀರಿನ ಆಳದ ಅರಿವಿಲ್ಲದೆ ಇಬ್ಬರು ಮುಳುಗಿದ್ದಾರೆ.
ಇದನ್ನು ಗಮನಿಸಿದ ಉಳಿದ ಗೆಳತಿಯರು ಅವರನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

