ತಮಿಳುನಾಡಿನ ಕೊಯ
ಮತ್ತೂರು ಜಿಲ್ಲೆಯ ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ಹತ್ತು ವರ್ಷದ ಬಾಲಕಿಯ ಶವ ಪತ್ತೆಯಾಗಿರುವ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಗುರುವಾರ ಮನೆಯಿಂದ ದಿನಸಿ ತರಲು ಹೊರಟಿದ್ದ ಬಾಲಕಿ ನಂತರ ಕಾಣೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಊರಾಚೆಯ ಸರೋವರದ ಸಮೀಪ ಶವವಾಗಿ ಪತ್ತೆಯಾಗಿದ್ದಳು. ಈ ಘಟನೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದ್ದು, ಸ್ಥಳೀಯರಲ್ಲಿ ಭೀತಿ ಹಾಗೂ ಆಕ್ರೋಶ ಹೆಚ್ಚಿಸಿದೆ.
ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಕೊಲೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಸಂಬಂಧ ತಮಿಳು ಸುದ್ದಿವಾಹಿನಿಗಳು ಹಲವು ಆತಂಕಕಾರಿ ಮಾಹಿತಿಗಳನ್ನು ಪ್ರಸಾರ ಮಾಡಿವೆ. ಪೋಕ್ಸೋ ಪ್ರಕರಣದ ಅಡಿಯಲ್ಲಿ ತನಿಖೆ ಆರಂಭಿಸಿರುವ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿದ್ದರು.
ವರದಿ: ಸುದ್ದಿ ಲೈವ್ ಡಾಟ್ ಕಾಮ್
ಘಟನೆ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಡಿಎಂಕೆ, ಎಐಎಡಿಎಂಕೆ ಹಾಗೂ ಬಿಜೆಪಿ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಬಾಲಕಿಯ ಸಾವಿಗೆ ನ್ಯಾಯ ಒದಗಿಸಬೇಕು ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ವಿವಿಧ ರಾಜಕೀಯ ನಾಯಕರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ವಿಜಯ್ ಕೂಡ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ಘಟನೆ ಅತ್ಯಂತ ದುಃಖಕರವಾಗಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಚಾರ್ಜ್‌ಶೀಟ್ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕೊಯಮತ್ತೂರು ಪಶ್ಚಿಮ ವಲಯದ ಐಜಿಪಿ ಆರ್.ವಿ. ರಮ್ಯಾ ಭಾರತಿ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಕಾರ್ತಿಕ್ ಮತ್ತು ಮೋಹನ್ ರಾಜ್ ಎಂಬ ಇಬ್ಬರು ಆರೋಪಿಗಳು ಬಾಲಕಿಯನ್ನು ಅಪಹರಿಸಿ ಬಳಿಕ ಕೊಲೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಆದರೆ ಇದೇ ಸುದ್ದಿಗೋಷ್ಠಿಯಲ್ಲಿ ಐಜಿಪಿ ರಮ್ಯಾ ಭಾರತಿ ಹಾಗೂ ಇತರ ಪೊಲೀಸ್ ಅಧಿಕಾರಿಗಳ ನಡೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಅತಿ ಸೂಕ್ಷ್ಮ ಮತ್ತು ಭೀಕರ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ನೀಡುವ ವೇಳೆ ಅವರು ನಗುತ್ತಾ ಮಾತನಾಡಿರುವುದು ಹಾಗೂ ತಮ್ಮ ಉಗುರಿನ ಅಂದಚಂದ ಗಮನಿಸುತ್ತಿದ್ದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇಂತಹ ಗಂಭೀರ ಪ್ರಕರಣದಲ್ಲಿ ಜವಾಬ್ದಾರಿಯುತವಾಗಿ ವರ್ತಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಪೊಲೀಸರ ನಡೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದು, “ಬಾಲಕಿಯ ಜೀವ ಹೋದಂತಹ ಪ್ರಕರಣದಲ್ಲಿ ಸಹಾನುಭೂತಿ ಇಲ್ಲದಂತೆ ವರ್ತಿಸಿರುವ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದ್ದಾರೆ. ಪ್ರಕರಣದ ತನಿಖೆ ಒಂದು ಕಡೆ ಸಾಗುತ್ತಿದ್ದರೆ, ಮತ್ತೊಂದೆಡೆ ಪೊಲೀಸ್ ಇಲಾಖೆಯ ನಡವಳಿಕೆ ಕುರಿತ ಚರ್ಚೆಯೂ ಜೋರಾಗಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

