ನವದೆಹಲಿ, ಮೇ 9: ಭಾರತೀಯ ಸೇನೆಯ ಹಿರಿಯ ಅಧಿಕಾರಿ ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು ದೇಶದ ಹೊಸ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ನೇಮಿಸಲಾಗಿದೆ.
ಭಾರತ ಸರ್ಕಾರವು ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಅವರು ಈಗಾಗಲೇ ಸಶಸ್ತ್ರ ಪಡೆಗಳ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪ್ರಸ್ತುತ CDS ಆಗಿರುವ ಜನರಲ್ ಅನಿಲ್ ಚೌಹಾಣ್ ಅವರ ಅಧಿಕಾರಾವಧಿ ಮೇ 30, 2026 ರಂದು ಪೂರ್ಣಗೊಳ್ಳಲಿದೆ.
ರಾಜಾ ಸುಬ್ರಮಣಿ ಅವರು ಭಾರತೀಯ ಸೇನೆಯ ವಿವಿಧ ಪ್ರಮುಖ ಕಮಾಂಡ್ ಹುದ್ದೆಗಳನ್ನು ನಿರ್ವಹಿಸಿದ್ದು, ದೇಶದ ಭದ್ರತಾ ವ್ಯವಸ್ಥೆಯಲ್ಲಿ ದೀರ್ಘ ಅನುಭವ ಹೊಂದಿದ್ದಾರೆ. ಅವರ ನೇಮಕವು ಭಾರತ ಸೇನೆಯ ತ್ರಿಸೇವೆಗಳ ಸಮನ್ವಯ ಹಾಗೂ ರಕ್ಷಣಾ ತಂತ್ರಜ್ಞಾನ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.
ಈ ನೇಮಕದೊಂದಿಗೆ ಭಾರತ ರಕ್ಷಣಾ ವ್ಯವಸ್ಥೆಯ ಉನ್ನತ ನಾಯಕತ್ವದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
