}

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ

suddilive.com
By -
0

 


ನವದೆಹಲಿ/ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ರಾಜಕೀಯ ಬೆಳವಣಿಗೆಗಳು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ದೆಹಲಿಯಲ್ಲಿ ನಡೆದ ಸುಮಾರು ಆರು ಗಂಟೆಗಳ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಗಂಭೀರವಾಗಿ ಚರ್ಚೆಯಾಗಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರಗಳ ಬಗ್ಗೆ ಚರ್ಚೆ ನಡೆಸಿದೆ ಎಂದು ತಿಳಿದುಬಂದಿದೆ.


ಸಭೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆ ಸ್ಥಾನ ನೀಡುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರಲು ಆಹ್ವಾನ ನೀಡಿದ್ದಾರೆ ಎನ್ನಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕೇಂದ್ರ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಅನುಭವವನ್ನು ಬಳಸಿಕೊಳ್ಳುವ ಉದ್ದೇಶದಿಂದ ಈ ಆಫರ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಪ್ರಸ್ತಾವನೆಗೆ ಸಿದ್ದರಾಮಯ್ಯ ಯಾವುದೇ ಸ್ಪಷ್ಟ ಸಮ್ಮತಿ ಸೂಚಿಸಿಲ್ಲ ಎಂದು ಹೇಳಲಾಗುತ್ತಿದೆ.


ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಅವರು ನೇರವಾಗಿ ಜಾರ್ಜ್ ನಿವಾಸಕ್ಕೆ ತೆರಳಿ ತಮ್ಮ ಆಪ್ತ ಸಚಿವರು ಹಾಗೂ ಕೆಲ ಶಾಸಕರೊಂದಿಗೆ ರಹಸ್ಯ ಸಭೆ ನಡೆಸಿದ್ದಾರೆ. ಈ ವೇಳೆ ದೆಹಲಿಯಲ್ಲಿ ನಡೆದ ಮಾತುಕತೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗಿದ್ದು, ಹೈಕಮಾಂಡ್ ಸೂಚನೆಗಳ ಕುರಿತು ಸಹ ಅಭಿಪ್ರಾಯ ವಿನಿಮಯ ನಡೆದಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಸಿದ್ದರಾಮಯ್ಯ ಮನಸ್ಸು ಮಾಡಿದ್ದಾರೆ ಎಂಬ ಮಾಹಿತಿಯೂ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.


ಇನ್ನೊಂದೆಡೆ, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಸಿದ್ದರಾಮಯ್ಯ ಅವರ ಆಪ್ತ ವಲಯ ತೀವ್ರ ಒತ್ತಾಯ ವ್ಯಕ್ತಪಡಿಸಿದೆ ಎನ್ನಲಾಗಿದೆ. “ನಿಮ್ಮ ಪರವಾಗಿ ನಾವು ಸ್ವತಃ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡುತ್ತೇವೆ. ಈಗ ರಾಜೀನಾಮೆ ನೀಡುವುದು ಸೂಕ್ತವಲ್ಲ” ಎಂದು ಸಚಿವರು ಹಾಗೂ ಶಾಸಕರು ಸಲಹೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.


ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ನಾನು ರಾಹುಲ್ ಗಾಂಧಿ ಅವರ ಮಾತನ್ನು ನಿರಾಕರಿಸಲು ಸಾಧ್ಯವಿಲ್ಲ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ನಾನು ರಾಜೀನಾಮೆ ನೀಡುತ್ತೇನೆ, ನೀವು ಬೇಕಾದರೆ ಹೋಗಿ ಮಾತನಾಡಿ” ಎಂದು ತಮ್ಮ ಆಪ್ತರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಗಳು ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default