ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ 2,000 ಕೋಟಿ ರೂ. ಮೊತ್ತದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಹಗರಣದ ತನಿಖೆ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಸಚಿವ Zameer Ahmed Khan ಅವರ ಒಡೆತನದ ‘ನ್ಯಾಷನಲ್ ಟ್ರಾವೆಲ್ಸ್’ ಸಂಸ್ಥೆಯ ಹೆಸರೂ ತನಿಖೆಯ ವಲಯಕ್ಕೆ ಬಂದಿದೆ. ಹಗರಣಕ್ಕೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆಯು ಸಂಸ್ಥೆಗೆ ಅಧಿಕೃತ ನೋಟಿಸ್ ಜಾರಿ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ನಡೆಸಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಜಾಗೃತ ದಳವು, ಬೋಗಸ್ ಬಿಲ್‌ಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟು ಮಾಡುತ್ತಿದ್ದ ದೊಡ್ಡ ಜಾಲವನ್ನು ಪತ್ತೆಹಚ್ಚಿತ್ತು. ತನಿಖೆ ವೇಳೆ ನಕಲಿ ಐಟಿಸಿ ಸೌಲಭ್ಯ ಪಡೆದಿರುವ ಶಂಕಿತ ಸಂಸ್ಥೆಗಳ ಪಟ್ಟಿಯಲ್ಲಿ ‘ನ್ಯಾಷನಲ್ ಟ್ರಾವೆಲ್ಸ್’ ಸಂಸ್ಥೆಯ ಹೆಸರೂ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಸಂಸ್ಥೆಯ ತೆರಿಗೆ ಪಾವತಿ, ಹಣಕಾಸು ವ್ಯವಹಾರ ಹಾಗೂ ಬಿಲ್ ದಾಖಲೆಗಳ ಸಂಪೂರ್ಣ ಮಾಹಿತಿಯೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಪ್ರಭಾವಿ ಸಚಿವರ ಸಂಸ್ಥೆಗೆ ನೋಟಿಸ್ ಜಾರಿಯಾಗಿರುವುದು ಆಡಳಿತ ಮತ್ತು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲು ಸಜ್ಜಾಗಿವೆ.
ಇದೀಗ ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಅಧಿಕಾರಿಗಳು, ಹಗರಣದ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಬೃಹತ್ ಜಾಲದ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದಾರೆ. ಹಲವು ಶೆಲ್ ಕಂಪನಿಗಳ ಮೂಲಕ ನಕಲಿ ಬಿಲ್ ಸೃಷ್ಟಿಸಿ, ಸರ್ಕಾರದ ತೆರಿಗೆ ಹಣವನ್ನು ಅಕ್ರಮವಾಗಿ ಕ್ಲೈಂ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.
ಈ ಹಗರಣದ ಮೂಲವನ್ನು ಬೆನ್ನಟ್ಟಿದ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಟಂಗ್‌ಸ್ಟನ್ ಸ್ಕ್ರ್ಯಾಪ್ ದೊಡ್ಡ ಮಟ್ಟದಲ್ಲಿ ಲಭ್ಯವಿಲ್ಲದಿದ್ದರೂ, ಇಲ್ಲಿಂದ ಭಾರೀ ಪ್ರಮಾಣದಲ್ಲಿ ರಫ್ತು ನಡೆದಿರುವ ದಾಖಲೆಗಳು ಅನುಮಾನಕ್ಕೆ ಕಾರಣವಾಗಿದ್ದವು. ಸುಮಾರು 217 ಕೋಟಿ ರೂ. ಮೌಲ್ಯದ ವ್ಯವಹಾರ ನಡೆಸಿ, 39 ಕೋಟಿ ರೂ. ತೆರಿಗೆ ಬಿಲ್ ಸೃಷ್ಟಿಸಿರುವ ಮಾಹಿತಿ ಪತ್ತೆಯಾದ ನಂತರ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜನವರಿ ತಿಂಗಳಲ್ಲಿ ಐವರನ್ನು ಬಂಧಿಸಲಾಗಿತ್ತು. ಇದೀಗ ತನಿಖೆಯನ್ನು ಮುಂದುವರಿಸಿರುವ ಅಧಿಕಾರಿಗಳು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ‘ಎಸ್‌ಕೆಎಸ್ ಟ್ರೇಡರ್ಸ್’ ಸಂಸ್ಥೆಯ ಸಲೀಮುಲ್ಲಾ ಹಾಗೂ ‘ಕೆಎಚ್ ಇ-ವೇಸ್ಟ್ ಸೈಕ್ಲರ್’ ಸಂಸ್ಥೆಯ ಹಸನ್ ಬೇಗ್ ಬಂಧಿತರಾಗಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಈ ಎರಡು ಸಂಸ್ಥೆಗಳು ಸೇರಿ ಬರೋಬ್ಬರಿ 2,384 ಕೋಟಿ ರೂ. ವ್ಯವಹಾರ ನಡೆಸಿ, ಸುಮಾರು 594 ಕೋಟಿ ರೂ. ಮೌಲ್ಯದ ನಕಲಿ ಐಟಿಸಿ ಬಿಲ್ ಪಡೆದಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನಷ್ಟು ಪ್ರಭಾವಿ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಹೆಸರುಗಳು ಹೊರಬರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

