}

ಉಡುಪಿ: ಹೊಸ ಬಾವಿ ತೋಡುವ ವೇಳೆ ದುರಂತ;ಮಣ್ಣಿನಡಿ ಸಿಲುಕಿದ ಕಾರ್ಮಿಕನ ರಕ್ಷಣೆಗೆ ಹರಸಾಹಸ

suddilive.com
By -
0

 

ಕೊಡವೂರಿನಲ್ಲಿ ಬಾವಿ ಕುಸಿತದ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿಶಾಮಕ ದಳ ಸಿಬ್ಬಂದಿ

ಉಡುಪಿ: ಕಾಮಗಾರಿ ವೇಳೆ ಬಾವಿ ಕುಸಿದ ಪರಿಣಾಮ ಕಾರ್ಮಿಕನೋರ್ವ ಮಣ್ಣಿನಡಿ ಸಿಲುಕಿರುವ ಘಟನೆ ಉಡುಪಿ ಜಿಲ್ಲೆಯ ಕೊಡವೂರು ಸಮೀಪ ಶುಕ್ರವಾರ ಸಂಜೆ ನಡೆದಿದೆ. ಘಟನೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಮಿಕನ ರಕ್ಷಣೆಗೆ ತುರ್ತು ಕಾರ್ಯಾಚರಣೆ ಮುಂದುವರಿದಿದೆ.


ಮಾಹಿತಿಯ ಪ್ರಕಾರ, ನಾಲ್ಕೈದು ಕಾರ್ಮಿಕರು ಹೊಸ ಬಾವಿ ತೋಡುವ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಏಕಾಏಕಿ ಬಾವಿಯ ಒಳಭಾಗದ ಮಣ್ಣು ಕುಸಿದಿದ್ದು, ಕಾರ್ಮಿಕರ ಮೇಲೆ ಬಿದ್ದಿದೆ ಎನ್ನಲಾಗಿದೆ. ಕುಸಿತ ಸಂಭವಿಸಿದ ಕ್ಷಣದಲ್ಲೇ ಕಾರ್ಮಿಕರು ಆತಂಕದಿಂದ ಹೊರಬರಲು ಯತ್ನಿಸಿದ್ದು, ಒಬ್ಬ ಕಾರ್ಮಿಕ ಮಾತ್ರ ಮಣ್ಣಿನಡಿ ಸಿಲುಕಿಕೊಂಡಿರುವುದಾಗಿ ತಿಳಿದು ಬಂದಿದೆ.


ಇನ್ನಿಬ್ಬರು ಕಾರ್ಮಿಕರು ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದು, ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿದ್ದ ಇತರರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದು, ಬಳಿಕ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.


ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿದ್ದು, ಮಣ್ಣಿನಡಿ ಸಿಲುಕಿರುವ ಕಾರ್ಮಿಕನನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಾಗ್ರತೆಯಿಂದ ಮಣ್ಣು ತೆರವುಗೊಳಿಸುವ ಕೆಲಸ ನಡೆಯುತ್ತಿದ್ದು, ಸ್ಥಳದಲ್ಲಿ ಜನಸಮೂಹ ಕೂಡ ಸೇರಿಕೊಂಡಿದೆ.


ಕಾರ್ಮಿಕನ ಸ್ಥಿತಿ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default