}

ಮಂಗಳೂರು : ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ: ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿ..!

suddilive.com
By -
0


 ಮಂಗಳೂರು: ರಾತ್ರಿ ಪಾಳಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಸಿಮೆಂಟ್ ಶೀಟ್ ತುಂಡಿನಿಂದ ಹಲ್ಲೆ ನಡೆಸಿ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕೇರಳದ ಕಾಂಞಿಗಾಡ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಕೊಕ್ಕಡ ನಿವಾಸಿ ಸಚಿನ್ ಕೆ.ಆರ್ (24) ಹಾಗೂ ನೆಲ್ಯಾಡಿ ನಿವಾಸಿ ಚಂದನ್ (24) ಎಂದು ಗುರುತಿಸಲಾಗಿದೆ.


ಬಂಧಿತರು ಮಂಗಳೂರಿನ ಅಶೋಕನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಸಚಿನ್ ಸ್ವೀಟ್ಸ್ ಫ್ಯಾಕ್ಟರಿಯ ವಾಹನ ಚಾಲಕರಾಗಿ ಹಾಗೂ ಚಂದನ್ ಶೋರೂಮ್ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮೇ 24ರಂದು ಬೆಳಗಿನ ಜಾವ ಸುಮಾರು 2:10ರ ವೇಳೆಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ಪ್ರದೇಶದಲ್ಲಿ ಇಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಇವರನ್ನು ಬೀಟ್ ಪೊಲೀಸ್ ಸಿಬ್ಬಂದಿ ತಡೆದು ವಿಚಾರಣೆ ನಡೆಸಿದ್ದರು.


ಪೊಲೀಸರ ಪ್ರಶ್ನೆಯಿಂದ ಆಕ್ರೋಶಗೊಂಡ ಆರೋಪಿಗಳು ಏಕಾಏಕಿ ಹಲ್ಲೆಗೆ ಮುಂದಾಗಿ, ಸಮೀಪದಲ್ಲಿದ್ದ ಸಿಮೆಂಟ್ ಶೀಟ್ ತುಂಡನ್ನು ಎತ್ತಿಕೊಂಡು ಪೊಲೀಸ್ ಸಿಬ್ಬಂದಿಯ ತಲೆಗೆ ಬಲವಾಗಿ ಹೊಡೆದಿದ್ದಾರೆ. ಪರಿಣಾಮ ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಗಾಯಗೊಂಡ ಸಿಬ್ಬಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.


ಘಟನೆಯ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಸಿಸಿಬಿ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.


ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ ಮೇ 26ರಂದು ಕೇರಳದ ಕಾಂಞಿಗಾಡ್‌ನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು. ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಇಲೆಕ್ಟ್ರಿಕ್ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಬಂಧಿತ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default