}

ಮಣಿಪಾಲ: ಪ್ರೀತಿ ನಿರಾಕರಿಸಿದ ಯುವತಿಗೆ ಭಗ್ನ ಪ್ರೇಮಿಯಿಂದ ಚೂರಿ ಇರಿತ; ಯುವತಿ ಸ್ಥಿತಿ ಗಂಭೀರ

suddilive.com
By -
0

 

manipal-love-rejection-stabbing-yogita-critical


ಉಡುಪಿ: ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಆಕ್ರೋಶಗೊಂಡ ಭಗ್ನ ಪ್ರೇಮಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಭೀಕರ ಘಟನೆ ಮಣಿಪಾಲದ ಅಲೆವೂರು ರಸ್ತೆಯ ಶಾಂತಿನಗರದ ಬಳಿ ನಡೆದಿದೆ. ಇಲ್ಲಿನ ಐಡಿಯಲ್ ಬಿಲ್ಡಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪಿಜಿಯೊಳಗೆ ನುಗ್ಗಿದ ಕಿರಾತಕ ಈ ಕೃತ್ಯ ಎಸಗಿದ್ದಾನೆ. ದಾಳಿಗೊಳಗಾದ ಯುವತಿಯನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಯೋಗಿತಾ (23) ಎಂದು ಗುರುತಿಸಲಾಗಿದ್ದು, ಸದ್ಯ ಆಕೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ.


ಮಂಗಳವಾರ ರಾತ್ರಿ ಯೋಗಿತಾ ತನ್ನ ಕೊಠಡಿಯಲ್ಲಿದ್ದಾಗ ಅಲ್ಲಿಗೆ ಬಂದ ಆರೋಪಿಯು ಆಕೆಯೊಂದಿಗೆ ಜಗಳ ತೆಗೆದು, ಏಕಾಏಕಿ ಚೂರಿಯಿಂದ ದೇಹದ ವಿವಿಧ ಭಾಗಗಳಿಗೆ ಮನಸೋಇಚ್ಛೆ ಇರಿದಿದ್ದಾನೆ ಎನ್ನಲಾಗಿದೆ. ಯುವತಿಯ ಚೀರಾಟ ಕೇಳಿ ಸುತ್ತಮುತ್ತಲಿನವರು ಧಾವಿಸಿ ಬರುವಷ್ಟರಲ್ಲಿ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಯುವತಿಯು ಈತನ ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದೇ ಈ ದಾಳಿಗೆ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.


ರಕ್ತದ ಮಡುವಿನಲ್ಲಿ ಬಿದ್ದಿದ್ದ ಯೋಗಿತಾಳನ್ನು ತಕ್ಷಣವೇ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಕೆಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ಯುವತಿಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ವಿಷಯ ತಿಳಿದ ತಕ್ಷಣ ಮಣಿಪಾಲ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಿಜಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಕಲೆಹಾಕುತ್ತಿದ್ದಾರೆ.


ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ನಗರದ ಹೊರವಲಯದ ರಸ್ತೆಗಳಲ್ಲಿ ನಾಕಾಬಂಧಿ ಹಾಕಲಾಗಿದ್ದು, ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಸಾರ್ವಜನಿಕ ಪ್ರದೇಶದಲ್ಲಿರುವ ಮಹಿಳಾ ಪಿಜಿಯಲ್ಲೇ ಇಂತಹ ಘಟನೆ ನಡೆದಿರುವುದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default