ಉಡುಪಿ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವಂತಹ ಘಟನೆಗಳು ಮರುಕಳಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಅತ್ಯಂತ ಮಹತ್ವದ ಪರೀಕ್ಷೆಯಾಗಿರುವ ನೀಟ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಂದಿಸಿದೆ. ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಲಕ್ಷಾಂತರ ವಿದ್ಯಾರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರೆ, ಪ್ರಶ್ನೆ ಪತ್ರಿಕೆ ಸೋರಿಕೆ ಮೂಲಕ ಕೆಲವರಿಗೆ ಅನ್ಯಾಯವಾಗಿ ಲಾಭವಾಗುತ್ತಿದೆ ಎಂದು ಹೇಳಿದರು.
ಪ್ರತಿಭಟನೆಯ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳ ಭವಿಷ್ಯ, ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಾರ್ವಜನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಹಾಳು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಎಚ್ಚರಿಕೆ ವಹಿಸಿ ಡಿಸಿ ಕಚೇರಿ ಮುಖ್ಯ ಗೇಟ್‌ನಲ್ಲಿಯೇ ಪ್ರತಿಭಟನಾಕಾರರನ್ನು ತಡೆದರು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ತೆರವುಗೊಳಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೃಷ್ಣ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಸುರಯ್ಯ ಅಂಜುಮ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

