}

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಮಹಿಳೆ ಸಾವು

suddilive.com
By -
0

 

padubidri-national-highway-car-accident-woman-death

ಪಡುಬಿದ್ರಿಯ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಸ್ತೆ ದಾಟಲು ಕಾಯುತ್ತಿದ್ದ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮೃತರನ್ನು ಸಾಸ್ತಾನ ಮೂಲದ ಮಮತಾ (40) ಎಂದು ಗುರುತಿಸಲಾಗಿದ್ದು, ಇವರೊಂದಿಗೆ ರಸ್ತೆ ದಾಟಲು ನಿಂತಿದ್ದ ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮಾಹಿತಿಯ ಪ್ರಕಾರ, ಮೃತ ಮಹಿಳೆ ಮಮತಾ ಮತ್ತು ಅವರ ಜೊತೆಗಿದ್ದ ಮತ್ತೊಬ್ಬರು ರಾಷ್ಟ್ರೀಯ ಹೆದ್ದಾರಿಯ ಪೂರ್ವ ಭಾಗದಿಂದ ಪಶ್ಚಿಮ ಭಾಗಕ್ಕೆ ಹೋಗುವ ಸಲುವಾಗಿ ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ರಸ್ತೆ ಬದಿಯಲ್ಲಿದ್ದ ಇಬ್ಬರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಮಮತಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಮಹಿಳೆಯನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಡುಬಿದ್ರಿ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ಅಪಘಾತ ಎಸಗಿದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ದಾರುಣ ಘಟನೆಗೆ ಸಂಬಂಧಿಸಿದಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default