ಗುಜರಾತ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು: ಫೈನಲ್ ಪ್ರವೇಶಿಸಿದ ಹಾಲಿ ಚಾಂಪಿಯನ್ಸ್

suddilive.com
By -
0

 


ಧರ್ಮಶಾಲಾ:  ಐಪಿಎಲ್ 2026 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟನ್ಸ್ ವಿರುದ್ಧ 92 ರನ್‌ಗಳ ಬೃಹತ್ ಗೆಲುವು ದಾಖಲಿಸುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದೆ.


ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಾಯಕ ರಜತ್ ಪಾಟೀದಾರ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ದಾಖಲಿಸಿತು. ಪಾಟೀದಾರ್ ಕೇವಲ 33 ಎಸೆತಗಳಲ್ಲಿ 9 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ ಅಜೇಯ 93 ರನ್ ಚಚ್ಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ವಿರಾಟ್ ಕೊಹ್ಲಿ 43 ಮತ್ತು ಕೃನಾಲ್ ಪಾಂಡ್ಯ 43 ರನ್ ಕಾಣಿಕೆ ನೀಡಿದರು. ಇದರಿಂದಾಗಿ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.


255 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ಆರಂಭದಲ್ಲೇ ಬ್ಯಾಟಿಂಗ್ ಕುಸಿತ ಎದುರಿಸಿತು. ರಾಹುಲ್ ತೇವಾಟಿಯಾ (68 ರನ್, 43 ಎಸೆತ) ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಆರ್‌ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಜೇಕಬ್ ಡಫಿ 3 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್, ರಸಿಖ್ ಸಲಾಮ್ ಮತ್ತು ಕೃನಾಲ್ ಪಾಂಡ್ಯ ತಲಾ ಎರಡು ವಿಕೆಟ್ ಕಚ್ಚಿದರು. ಅಂತಿಮವಾಗಿ ಗುಜರಾತ್ ತಂಡ 19.3 ಓವರ್‌ಗಳಲ್ಲಿ 162 ರನ್‌ಗಳಿಗೆ ಆಲೌಟ್ ಆಯಿತು.


Tags:

Post a Comment

0 Comments

Post a Comment (0)
3/related/default