ಉಡುಪಿ ಕಿನ್ನಿಮೂಲ್ಕಿಯಲ್ಲಿ ಭೀಕರ ಅಪಘಾತ: ಲಾರಿಗೆ ಗೂಡ್ಸ್ ಟೆಂಪೋ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು

suddilive.com
By -
0

 


ಉಡುಪಿ, ಮೇ.31: ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೂಡ್ಸ್ ಟೆಂಪೋ ಚಾಲಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಪಿ (29) ಎಂದು ಗುರುತಿಸಲಾಗಿದೆ.


ಲಭ್ಯ ಮಾಹಿತಿಯ ಪ್ರಕಾರ, ಸರಕು ಸಾಗಣೆ ಮಾಡುತ್ತಿದ್ದ ಗೂಡ್ಸ್ ಟೆಂಪೋವು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ರಸ್ತೆ ಬದಿಯಲ್ಲಿ ಅಥವಾ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಅಪಘಾತದ ತೀವ್ರತೆಗೆ ಟೆಂಪೋದ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕ ಕ್ಯಾಬಿನ್‌ನೊಳಗೆ ಸಿಲುಕಿಕೊಂಡಿದ್ದರು. ಡಿಕ್ಕಿಯ ರಭಸಕ್ಕೆ ಪ್ರಶಾಂತ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಸಂಚಾರಿ ಠಾಣೆ ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಟೆಂಪೋದಲ್ಲಿ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರತೆಗೆದಲು ಸಾಕಷ್ಟು ಹರಸಾಹಸ ಪಡಬೇಕಾಯಿತು. ಬಳಿಕ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲಾಯಿತು.


ಮೃತ ಪ್ರಶಾಂತ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಘಟನೆ ಸ್ಥಳೀಯರಲ್ಲಿ ದುಃಖದ ವಾತಾವರಣವನ್ನು ಮೂಡಿಸಿದೆ. ಪ್ರಕರಣ ಸಂಬಂಧ ಸಂಚಾರಿ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default