}

ಉಡುಪಿಯಲ್ಲಿ ಭೀಕರ ಅಪಘಾತ: ನೀರಿನ ಟ್ಯಾಂಕರ್‌ಗೆ ಸ್ಕೂಟರ್ ಡಿಕ್ಕಿ, ಯುವಕ ಸಾವು

suddilive.com
By -
0

 

udupi-paniyooru-water-tanker-scooter-accident-krishna-moolya-death

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಣಿಯೂರಿನಲ್ಲಿ ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತ ಯುವಕನನ್ನು ಪಣಿಯೂರು ಸೆಂಟರ್ ನಿವಾಸಿ ಕೃಷ್ಣ ಮೂಲ್ಯ (22) ಎಂದು ಗುರುತಿಸಲಾಗಿದೆ.


ಮಾಹಿತಿಯ ಪ್ರಕಾರ, ಕೃಷ್ಣ ಮೂಲ್ಯ ಅವರು ಪ್ರತಿದಿನದಂತೆ ಮಂಗಳವಾರ ಮುಂಜಾನೆ ಪಣಿಯೂರು ಪೇಟೆಗೆ ಹಾಲು ಖರೀದಿಸಲು ಸ್ಕೂಟರ್‌ನಲ್ಲಿ ತೆರಳಿದ್ದರು. ಹಾಲು ಖರೀದಿಸಿಕೊಂಡು ಮರಳಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪಣಿಯೂರು ಸಮೀಪದ ರಸ್ತೆಯಲ್ಲಿ ಇವರ ಸ್ಕೂಟರ್ ಮುಂದೆ ಚಲಿಸುತ್ತಿದ್ದ ನೀರಿನ ಟ್ಯಾಂಕರ್, ಕಂಚುಗಾರ ರಸ್ತೆಯ ಕಡೆಗೆ ತಿರುಗಲು ಏಕಾಏಕಿ ಬಲಭಾಗಕ್ಕೆ ಕ್ರಾಸ್ ಮಾಡಿದೆ ಎನ್ನಲಾಗಿದೆ.


ಈ ಸಂದರ್ಭ ಸ್ಕೂಟರ್ ನಿಯಂತ್ರಣ ತಪ್ಪಿ ಟ್ಯಾಂಕರ್‌ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೃಷ್ಣ ಮೂಲ್ಯ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಅಪಘಾತದ ಪರಿಣಾಮ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ರಕ್ಷಣೆಗೆ ಧಾವಿಸಿದ್ದಾರೆ.


ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಮೂಲ್ಯ ಅವರನ್ನು ಸ್ಥಳೀಯರು ತಕ್ಷಣ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 


ಘಟನೆಯ ಮಾಹಿತಿ ತಿಳಿದ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default