}

ಉಡುಪಿ: ಹಿಟ್ & ರನ್: ಅಪರಿಚಿತ ವ್ಯಕ್ತಿ ಮೃತ್ಯು

suddilive.com
By -
0

 

uppoor-nh66-hit-and-run-accident-unknown-man-dead-brahmavar

ಉಡುಪಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ಉಪ್ಪೂರು ಗ್ರಾಮದ ಕುದ್ರುಬೆಟ್ಟು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇ 15ರಂದು ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಮಾಹಿತಿಯ ಪ್ರಕಾರ, ಉಡುಪಿ ಕಡೆಯಿಂದ ಬ್ರಹ್ಮಾವರ ಕಡೆಗೆ ಸಾಗುತ್ತಿದ್ದ ಬಿಳಿ ಬಣ್ಣದ ಕಾರೊಂದು ರಸ್ತೆ ದಾಟಲು ನಿಂತಿದ್ದ ಸುಮಾರು 30ರಿಂದ 35 ವರ್ಷ ಪ್ರಾಯದ ವ್ಯಕ್ತಿಗೆ ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ವ್ಯಕ್ತಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಅಪಘಾತ ಸಂಭವಿಸಿದ ಬಳಿಕ ಕಾರು ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಇಂತಹ ಅಪಘಾತಗಳು ಹೆಚ್ಚಾಗುತ್ತಿರುವುದಾಗಿ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಕಾರು ಚಾಲಕನ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಇತರೆ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ವಾಹನದ ಸುಳಿವು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.


ಮೃತ ವ್ಯಕ್ತಿಯ ಗುರುತು ಅಥವಾ ಅವರ ಸಂಬಂಧಿಕರ ಕುರಿತು ಯಾವುದೇ ಮಾಹಿತಿ ಇರುವವರು ಬ್ರಹ್ಮಾವರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 0820-2561044 ಅಥವಾ ಮೊಬೈಲ್ ಸಂಖ್ಯೆ 9480805453 ಅನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default