}

ಮಕ್ಕಳ ಮೇಲಿನ ದೌರ್ಜನ್ಯ ಆರೋಪ: ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು

suddilive.com
By -
0

 


ಮಕ್ಕಳ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ವಿಶೇಷ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸ್ವಾಮೀಜಿ ವಿರುದ್ಧ ಹರಿಹರ ಮಠದ ವಸತಿ ನಿಲಯದಲ್ಲಿದ್ದ ಮಕ್ಕಳಿಗೆ ದೌರ್ಜನ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಅವರು ಏಪ್ರಿಲ್ 21ರಂದು ವಿಶೇಷ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಕೆಲವು ಷರತ್ತುಗಳೊಂದಿಗೆ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ನೀಡಿದೆ.

ಜಾಮೀನು ಷರತ್ತುಗಳ ಪ್ರಕಾರ, ಸ್ವಾಮೀಜಿ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಹಾಗೂ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ತನ್ನ ನ್ಯಾಯವ್ಯಾಪ್ತಿಯನ್ನು ಬಿಟ್ಟು ಹೊರ ಹೋಗಬಾರದು ಎಂದು ಸೂಚಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ಹರಿಹರ ಮಠದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಮೂವರು ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ (CWC) ಮುಂದೆ ದೂರು ದಾಖಲಿಸಿದ್ದರು.

ಸ್ವಾಮೀಜಿ ಹಾಗೂ ಅವರ ಬೆಂಬಲಿಗರು ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಮಕ್ಕಳು ದೂರಿನಲ್ಲಿ ಆರೋಪಿಸಿದ್ದರು.

ಈ ಆರೋಪದ ಹಿನ್ನೆಲೆ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಇದೀಗ ನ್ಯಾಯಾಲಯದ ಜಾಮೀನು ಆದೇಶದೊಂದಿಗೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default