}

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಭೇಟಿ, ಧಾರ್ಮಿಕ ಮತ್ತು ಸಾಮಾಜಿಕ ಸೇವೆಗಳಿಗೆ ಉಪರಾಷ್ಟ್ರಪತಿಯ ಪ್ರಶಂಸೆ

suddilive.com
By -
0

 


ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಅವರು, ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದ್ದು, ಕ್ಷೇತ್ರದ ಆಡಳಿತ ಮಂಡಳಿ ವತಿಯಿಂದ ಆತ್ಮೀಯ ಸ್ವಾಗತ ಕೋರಲಾಯಿತು.


ದೇವರ ದರ್ಶನದ ಬಳಿಕ ಉಪರಾಷ್ಟ್ರಪತಿಗಳು ಧರ್ಮಸ್ಥಳದ ಪ್ರಸಿದ್ಧ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ, ಭಕ್ತರಿಗೆ ನೀಡಲಾಗುತ್ತಿರುವ ಉಚಿತ ಅನ್ನದಾಸೋಹ ಸೇವೆ ಹಾಗೂ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಪ್ರತಿದಿನ ಸಾವಿರಾರು ಭಕ್ತರಿಗೆ ಯಾವುದೇ ಭೇದಭಾವವಿಲ್ಲದೆ ಅನ್ನದಾಸೋಹ ಸೇವೆ ನೀಡುತ್ತಿರುವ ಕಾರ್ಯವನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.


ನಂತರ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ನಡೆಯುತ್ತಿರುವ ವಿವಿಧ ಸೇವಾ ಚಟುವಟಿಕೆಗಳ ಕುರಿತು ಉಪರಾಷ್ಟ್ರಪತಿಗಳಿಗೆ ವಿವರಿಸಲಾಯಿತು. ಕ್ಷೇತ್ರದ ಮೂಲಕ ಸಮಾಜಮುಖಿ ಸೇವೆಗಳು ನಿರಂತರವಾಗಿ ನಡೆಯುತ್ತಿರುವುದು ಶ್ಲಾಘನೀಯ ಎಂದು ಉಪರಾಷ್ಟ್ರಪತಿಗಳು ಅಭಿಪ್ರಾಯಪಟ್ಟರು.


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸೇವೆಗಳು ಹಾಗೂ ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳವು ದೇಶದಾದ್ಯಂತ ಮಾದರಿ ಸೇವಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವುದನ್ನು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಹೆಗ್ಗಡೆಯವರ ಕುಟುಂಬ ಸದಸ್ಯರು ಉಪಸ್ಥಿತರಿದ್ದು ಉಪರಾಷ್ಟ್ರಪತಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.


ಉಪರಾಷ್ಟ್ರಪತಿಗಳ ಧರ್ಮಸ್ಥಳ ಭೇಟಿ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಡಿ. ಶ್ರೇಯಸ್ ಕುಮಾರ್, ಅಮಿತ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಉಪರಾಷ್ಟ್ರಪತಿಗಳ ಭೇಟಿ ಧರ್ಮಸ್ಥಳ ಕ್ಷೇತ್ರಕ್ಕೆ ವಿಶೇಷ ಮಹತ್ವವನ್ನು ತಂದಿದ್ದು, ಭಕ್ತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿತು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default