}

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ | 679 ಕೆಜಿ ಅಕ್ಕಿ ವಶ, ಆರೋಪಿ ಬಂಧನ

suddilive.com
By -
0

ವಿಟ್ಲದಲ್ಲಿ ಅಕ್ರಮ ಪಡಿತರ ಅಕ್ಕಿ ದಾಸ್ತಾನು ಪತ್ತೆ | 679 ಕೆಜಿ ಅಕ್ಕಿ ವಶ, ಆರೋಪಿ ಬಂಧನ

 ವಿಟ್ಲ: ಅಟೋ ರಿಕ್ಷಾವೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇಡಲಾಗಿದೆ ಎಂಬ ಮಾಹಿತಿ ಪಡೆದು ಆಹಾರ ಇಲಾಖೆ ಅಧಿಕಾರಿಗಳು ಮತ್ತು ವಿಟ್ಲ ಪೊಲೀಸರು ದಾಳಿ ಮಾಡಿ, ವಶಪಡಿಸಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಶಿವಾಜಿನಗರದಲ್ಲಿ ಮೇ.10ರ ರವಿವಾರ ಸಂಭವಿಸಿದೆ.

ದಾಳಿ ಮಾಡಿದಾಗ ಮನೆಯೊಂದರ ಅಂಗಳದಲ್ಲಿ ಅಟೋರಿಕ್ಷಾದಲ್ಲಿ 15 ಚೀಲ ಪಡಿತರ ಅಕ್ಕಿಯನ್ನು ತುಂಬಿಸಿಟ್ಟಿರುವುದು ಕಂಡುಬಂದಿದೆ.

ಸ್ಥಳದಲ್ಲಿದ್ದ ಆರೋಪಿ ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್‌ (40) ತಾನೇ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ದಾಸ್ತಾನು ಇಟ್ಟುಕೊಂಡಿರುವುದಾಗಿ ಒಪ್ಪಿಕೊಂಡಿದ್ದಾನೆ.

15 ಪ್ಲಾಸ್ಟಿಕ್‌ ಚೀಲಗಳಲ್ಲಿ ಒಟ್ಟು 679.38 ಕೆಜಿ ತೂಕದ ಪಡಿತರ ಅಕ್ಕಿ (ಅಂದಾಜು ಮೌಲ್ಯ 23,098/-), ಇತರ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಅವಶ್ಯಕ ವಸ್ತುಗಳ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default