}

ಯಾವ ಟ್ರಬಲ್ ಶೂಟರೂ ಇಲ್ಲ. ಅದೆಲ್ಲವೂ ಮಾಧ್ಯಮಗಳ ಸೃಷ್ಟಿ. ಟ್ರಬಲ್ ಶೂಟರ್ ಆಗಿದ್ದರೆ ಅಸ್ಸಾಂ ಗೆ ಹೋಗಿ ಯಾಕೆ ಟ್ರಬಲ್ ಶೂಟ್ ಮಾಡಿಲ್ಲ? : ಸಿಎಂ ಡಿಕೆ ಶಿವಕುಮಾರ್‌ಗೆ ಕೆ.ಎನ್ ರಾಜಣ್ಣ ಟಾಂಗ್

suddilive.com
By -
0

 


ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಬೆನ್ನಲ್ಲೇ ಸಚಿವ ಕೆ.ಹೆಚ್.ಮುನಿಯಪ್ಪ ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಇದರಿಂದಾಗಿ ಟ್ರಬಲ್ ಶೂಟರ್ ಎಂದು ಹೆಸರಾಗಿದ್ದ ಡಿ.ಕೆ.ಶಿವಕುಮಾರ್ ಅವರಿಗೇ ಟ್ರಬಲ್ ಶುರುವಾಗಿದೆ ಎಂಬ ಚರ್ಚೆ ಆರಂಭವಾಗಿದೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಕೆ.ಎನ್.ರಾಜಣ್ಣ, ರಾಮಲಿಂಗಾರೆಡ್ಡಿ ಜಲಸಂಪನ್ಮೂಲ ಖಾತೆ ತನಗೆ ಬೇಡ. ನಗರಾಭಿವೃದ್ಧಿ ಖಾತೆ ನೀಡುವಂತೆ ಕೇಳಿದ್ದರು. ಆದರೆ ಅವರು ಕೇಳಿದ ಖಾತೆ ಸಿಕ್ಕಿಲ್ಲ. ಹಾಗಾಗಿ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲ್ಲ ಎಂದು ರಾಜೀನಾಮೆ ಕೊಟ್ಟಿದ್ದಾರೆ ಎಂದರು.


ಟ್ರಬಲ್ ಶೂಟರ್ ಗೆ ಟ್ರಬಲ್ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜಣ್ಣ, ಯಾವ ಟ್ರಬಲ್ ಶೂಟರೂ ಇಲ್ಲ. ಅದೆಲ್ಲವೂ ಮಾಧ್ಯಮಗಳ ಸೃಷ್ಟಿ. ಟ್ರಬಲ್ ಶೂಟರ್ ಆಗಿದ್ದರೆ ಅಸ್ಸಾಂ ಗೆ ಹೋಗಿ ಯಾಕೆ ಟ್ರಬಲ್ ಶೂಟ್ ಮಾಡಿಲ್ಲ? ಎಂದು ಪ್ರಶ್ನಿಸಿದರು. ಸುಮ್ಮನೇ ಏಣೀ ಹೇಳುವುದಲ್ಲ ಎಂದರು.

ಈಗ ಈಶ್ವರ ಖಂಡ್ರೆ ಅವರಿಗೂ ಖಾತೆ ಬದಲಾಗಿದೆ. ಪರಮೇಶ್ವರ್ ಅವರಿಗೂ ಖಾತೆ ಬದಲಾಗಿದೆ. ಯಾರ ಆಸ್ತಿ ಯಾರಪ್ಪನ ಸ್ವತ್ತಲ್ಲ. ಬದಲಾದ ಸನ್ನಿವೇಶಗಳಿಗೆ ಅನುಗುಣವಾಗಿ ಅವಕಾಶಗಳು ದೊರೆಯುತ್ತವೆ. ಅವಕಾಶ ಸಿಕ್ಕಾಗ ಅವರು ತಮ್ಮ ಬುದ್ಧಿಶಕ್ತಿ ಉಪಯೋಗಿಸಿ ಜನಪರವಾದ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default