}

ಅಜೆಕಾರು ಶಾಲೆಯಲ್ಲಿ ಅವಘಡ: ಕಸ ಸುಡುತ್ತಿದ್ದ ವೇಳೆ ಭಾರೀ ಸ್ಫೋಟ! ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

suddilive.com
By -
0



ಅಜೆಕಾರು: ಶಾಲಾ ಆವರಣದಲ್ಲಿ ಕಸ ಸುಡುವ ವೇಳೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಅಜೆಕಾರು ಸಮೀಪದ ಕುಕ್ಕುಜೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ಸಂಬಂಧ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ವಿರುದ್ಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ದೂರುದಾರ ನಿತ್ಯಾನಂದ ನಾಯಕ್ (45) ಅವರ ಪುತ್ರ ಸಂಸ್ಕೃತ್ (12) ಕುಕ್ಕುಜೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಜೂನ್ 3ರಂದು ಶಾಲೆಯ ಸಮಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಕಂಪ್ಯೂಟರ್ ತರಗತಿ ಕೊಠಡಿಯನ್ನು ಸ್ವಚ್ಛಗೊಳಿಸುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.


ಸ್ವಚ್ಛಗೊಳಿಸಿದ ಬಳಿಕ ಸಂಗ್ರಹವಾದ ಕಸವನ್ನು ಶಾಲೆಯ ಆವರಣದ ಒಂದು ಬದಿಗೆ ಹಾಕಿ ಅದಕ್ಕೆ ಬೆಂಕಿ ಹಚ್ಚಿ ಸುಡುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಸಂಸ್ಕೃತ್ ಸೇರಿದಂತೆ ಗಗನ್ (12), ಹೃತ್ವಿಕ್ (12) ಹಾಗೂ ಅದ್ವಿನ್ (11) ಎಂಬ ವಿದ್ಯಾರ್ಥಿಗಳು ಕಸಕ್ಕೆ ಬೆಂಕಿ ಹಚ್ಚಿದ್ದರು.


ಕಸ ಸುಡುತ್ತಿದ್ದ ಸಂದರ್ಭದಲ್ಲಿ ಕಸದ ರಾಶಿಯಲ್ಲಿದ್ದ ಯಾವುದೋ ಡಬ್ಬದಂತಹ ವಸ್ತು ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಬೆಂಕಿಯ ಜ್ವಾಲೆ ಹಾಗೂ ಸ್ಫೋಟದ ಪರಿಣಾಮದಿಂದ ನಾಲ್ವರು ವಿದ್ಯಾರ್ಥಿಗಳಿಗೂ ಸುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


ಶಾಲಾ ಮಕ್ಕಳಿಂದ ಕಸ ಸುಡಿಸುವ ಕೆಲಸ ಮಾಡಿಸಿಕೊಂಡಿರುವುದು ಹಾಗೂ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವುದೇ ಈ ದುರ್ಘಟನೆಗೆ ಕಾರಣವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಜೆಕಾರು ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.


ಈ ಸಂಬಂಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 19/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 287ರ ಪ್ರಕಾರ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default