ಅಸ್ಸಾಂನ ಗೋಲ್ಪಾರಾ ಜಿಲ್ಲೆಯ ಕೃಷ್ಣೈ ಪ್ರದೇಶದ ಹಬ್ರಾಘಾಟ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿರುವ ಗೋಮಾಂಸಕ್ಕೆ ಸಂಬಂಧಿಸಿದ ಘಟನೆಯು ಸದ್ಯ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ ಸುದ್ದಿ ಲೈವ್ ಡಾಟ್ ಕಾಮ್
ಲಭ್ಯವಾಗಿರುವ ಮಾಧ್ಯಮ ವರದಿಗಳ ಪ್ರಕಾರ, 9ನೇ ತರಗತಿಯ ಐವರು ವಿದ್ಯಾರ್ಥಿಗಳು ತಮ್ಮ ಟಿಫಿನ್ ಬಾಕ್ಸ್‌ನಲ್ಲಿ ಗೋಮಾಂಸವನ್ನು ಶಾಲೆಗೆ ತಂದಿದ್ದರು. ಮಧ್ಯಾಹ್ನದ ವಿರಾಮದ ಸಮಯದಲ್ಲಿ ಅವರು ಅದನ್ನು ಸೇವಿಸುತ್ತಿದ್ದಾಗ, ಅಲ್ಲೇ ಇದ್ದ ಇಬ್ಬರು ಹಿಂದೂ ವಿದ್ಯಾರ್ಥಿಗಳಿಗೂ ಅದನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಹಿಂದೂ ವಿದ್ಯಾರ್ಥಿಗಳು ಅದನ್ನು ನಿರಾಕರಿಸಿದಾಗ, ಮಾಂಸದ ತುಂಡುಗಳನ್ನು ಅವರ ಬಾಯಿಯ ಬಳಿ ತಂದು ಬಲವಂತವಾಗಿ ತಿನ್ನಿಸಲು ಯತ್ನಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತಕ್ಷಣವೇ ಆ ವಿದ್ಯಾರ್ಥಿಗಳು ಅಲ್ಲಿಂದ ತೆರಳಿ ಶಾಲೆಯ ಶಿಕ್ಷಕರಿಗೆ ವಿಷಯ ಮುಟ್ಟಿಸಿದ್ದಾರೆ.
ಮನೆಗೆ ಮರಳಿದ ವಿದ್ಯಾರ್ಥಿಗಳು ಪೋಷಕರಿಗೆ ಈ ವಿಷಯ ತಿಳಿಸುತ್ತಿದ್ದಂತೆ ಆಕ್ರೋಶ ಭುಗಿಲೆದ್ದಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಹಾಗೂ ಪೋಷಕರು ಶಾಲೆಯ ಮುಂದೆ ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಘಟನೆಯಿಂದಾಗಿ ಓರ್ವ ವಿದ್ಯಾರ್ಥಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ. ವರದಿ ಸುದ್ದಿ ಲೈವ್ ಡಾಟ್ ಕಾಮ್
ಇದೇ ವೇಳೆ ಶಾಲಾ ಆಡಳಿತ ಮಂಡಳಿಯ ವಿರುದ್ಧವೂ ಗಂಭೀರ ಆರೋಪಗಳು ಕೇಳಿಬಂದಿವೆ. ಆರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಕೆಲವು ಶಿಕ್ಷಕರು ವಿಷಯವನ್ನು ಮುಚ್ಚಿಡಲು ಪ್ರಯತ್ನಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಈ ಬಗ್ಗೆ ಯಾರಿಗೂ ಹೇಳದಂತೆ ಸಲಹೆ ನೀಡಿದ್ದರು ಎಂದು ಸಂತ್ರಸ್ತ ಕುಟುಂಬಗಳು ದೂರಿದ್ದಾರೆ. ಆದರೆ ಈ ಆರೋಪವನ್ನು ನಿರಾಕರಿಸಿರುವ ಶಾಲಾ ಆಡಳಿತವು, ಈಗಾಗಲೇ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಕಠಿಣ ಎಚ್ಚರಿಕೆ ನೀಡಲಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಲಿಖಿತ ಭರವಸೆ ಪಡೆಯಲಾಗಿದೆ ಎಂದು ಸ್ಪಷ್ಟನೆ ನೀಡಿದೆ.
ಘಟನೆಗೆ ಸಂಬಂಧಿಸಿದಂತೆ ಕೃಷ್ಣೈ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಶಾಲೆಗೆ ಗೋಮಾಂಸ ತಂದಿದ್ದ ವಿದ್ಯಾರ್ಥಿಯ ತಾಯಿ ನೂರ್ ಸಾಹಿದಾ ಬೇಗಂ ಎಂಬುವವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉಳಿದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ. ವರದಿ ಸುದ್ದಿ ಲೈವ್ ಡಾಟ್ ಕಾಮ್
ವಿಷಯ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಗೋಲ್ಪಾರಾ ಜಿಲ್ಲಾಧಿಕಾರಿ ಪ್ರದೀಪ್ ತಿಮುಂಗ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಮಹಂತ ಅವರು ಶಾಲೆಗೆ ಖುದ್ದಾಗಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಇನ್ಮುಂದೆ ಶಾಲೆಗಳಿಗೆ ವಿದ್ಯಾರ್ಥಿಗಳು ಮಾಂಸ ಹಾಗೂ ಮೀನು ಪದಾರ್ಥಗಳನ್ನು ಟಿಫಿನ್‌ನಲ್ಲಿ ತರದಂತೆ ಆಡಳಿತ ಮಂಡಳಿಗೆ ಸಲಹೆ ನೀಡಲಾಗಿದೆ ಎಂದು ತಿಳಿದುಬಂದಿದೆ. ವರದಿ ಸುದ್ದಿ ಲೈವ್ ಡಾಟ್ ಕಾಮ್
ಪ್ರಸ್ತುತ ಪ್ರದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಸಾರ್ವಜನಿಕರಲ್ಲಿ ಜಿಲ್ಲಾಡಳಿತ ಮನವಿ ಮಾಡಿದ್ದು, ಪೊಲೀಸ್ ತನಿಖೆ ಮುಂದುವರಿದಿದೆ.
ವರದಿ: www.suddilive.com
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

