}

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ; ಸಹೋದ್ಯೋಗಿ ವಿರುದ್ಧ ಪ್ರಕರಣ ದಾಖಲು

suddilive.com
By -
0

ಕಡಬ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರು ತಮ್ಮ ಸಹೋದ್ಯೋಗಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ದೂರಿನ ಪ್ರಕಾರ, ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ರೆಂಜಿಲಾಡಿ ನಿವಾಸಿಯಾಗಿರುವ ಮಹಿಳೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆಸ್ಪತ್ರೆಯ ಔಷಧಿ ವಿಭಾಗದ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ಎಂಬವರು ಆಸ್ಪತ್ರೆಯ ಔಷಧಾಲಯ ಉಗ್ರಾಣದಲ್ಲಿ ಹಲವು ಸಂದರ್ಭಗಳಲ್ಲಿ ಅಸಭ್ಯ ವರ್ತನೆ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಅವರು ಆರೋಪಿಸಿದ್ದಾರೆ.


ಇದಲ್ಲದೆ, ಈ ವಿಚಾರವನ್ನು ಇತರರಿಗೆ ತಿಳಿಸಿದರೆ ಉದ್ಯೋಗದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆಯೂ ಮಹಿಳೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


ಮಹಿಳೆಯ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default