ಉತ್ತರ ಕನ್ನಡ ಜಿಲ್ಲೆಯ ಸೂಕ್ಷ್ಮ ಪ್ರದೇಶವಾದ ಭಟ್ಕಳದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಿಂದೂ ಸಂಘಟನೆಯ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ನೂರಾರು ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಯ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಯುವತಿಯೊಬ್ಬಳನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಮುಸ್ಲಿಂ ಯುವಕನನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದ ಮುಖಂಡರ ಮೇಲೆಯೇ ಈಗ ಕಾನೂನು ಕ್ರಮ ಜರುಗಿಸಿರುವುದು ಹಿಂದೂ ಕಾರ್ಯಕರ್ತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯ ವಿವರಗಳ ಪ್ರಕಾರ, ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ತನ್ನ ಕಾರಿನಲ್ಲಿ ಕೂರಿಸಿಕೊಂಡು ಭಟ್ಕಳದಿಂದ ಸಾಗರದ ಕಡೆಯಿರುವ ಅರಣ್ಯ ಪ್ರದೇಶದತ್ತ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆಯ ಪ್ರಮುಖರು ತಕ್ಷಣ ಕಾರ್ಯಪ್ರವೃತ್ತರಾಗಿ ಕಾರನ್ನು ಮಾರ್ಗಮಧ್ಯದಲ್ಲೇ ಅಡ್ಡಗಟ್ಟಿದ್ದಾರೆ. ಈ ವೇಳೆ ಯುವತಿಯನ್ನು ಕಾಡಿನ ಕಡೆಗೆ ಏಕೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಮುಖಂಡರು ಪ್ರಶ್ನಿಸಿದಾಗ, ಆ ಕಡೆಯಿಂದ ಯಾವುದೇ ಸ್ಪಷ್ಟ ಅಥವಾ ಸೂಕ್ತ ಉತ್ತರ ಲಭಿಸಿಲ್ಲ ಎಂದು ಹೇಳಲಾಗಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಹಿಂದೂ ಮುಖಂಡರು ಯಾವುದೇ ಕಾನೂನು ಕೈಗೆತ್ತಿಕೊಳ್ಳದೆ, ಇಬ್ಬರಿಗೂ ಬುದ್ಧಿವಾದ ಹೇಳುವಂತೆ ಕೋರಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ಸುರಕ್ಷಿತವಾಗಿ ಸ್ಥಳೀಯ ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಆದರೆ ಈ ಘಟನೆಯ ನಂತರ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಳ್ಳುವ ಬದಲಾಗಿ, ಕಾರನ್ನು ತಡೆದು ನಿಲ್ಲಿಸಿದ ಹಿಂದೂ ಸಂಘಟನೆಯ ಮುಖಂಡರ ಮೇಲೆಯೇ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಈ ಧೋರಣೆಯು ಹಿಂದೂ ಸಂಘಟನೆಗಳನ್ನು ಕೆರಳಿಸುವಂತೆ ಮಾಡಿದೆ.
ಪೊಲೀಸರ ಈ ಏಕಪಕ್ಷೀಯ ಕ್ರಮದ ವಿರುದ್ಧ ಭಟ್ಕಳದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು. ಮುಖಂಡರ ವಿರುದ್ಧ ದಾಖಲಿಸಲಾಗಿರುವ ಪ್ರಕರಣವನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಠಾಣೆಯ ಮುಂಭಾಗದಲ್ಲಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ತಮ್ಮ ಆವಹಲನ್ನು ವ್ಯಕ್ತಪಡಿಸುತ್ತಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

