}

ಕರ್ನಾಟಕ ಕಾಂಗ್ರೆಸ್‌ಗೆ ಹೊಸ ಸಾರಥಿ: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ ಸಾಧ್ಯತೆ

suddilive.com
By -
0

BK Hariprasad appointed as KPCC President by Congress High Command in Karnataka

ಬೆಂಗಳೂರು, ಜೂನ್ 3: ಕರ್ನಾಟಕ ಕಾಂಗ್ರೆಸ್ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ.ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ತೆರವಾಗಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೊನೆಗೂ ಕಾಂಗ್ರೆಸ್ ವರಿಷ್ಠರು ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ. 


ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸಿರುವ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದಾರೆ. ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕದಿಂದ ರಾಜಕೀಯ ಜೀವನ ಆರಂಭಿಸಿದ್ದ ಅವರು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದಾರೆ. ಅವರು ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದು, ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. 


ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕರ ಆಯ್ಕೆ ಕುರಿತು ಹಲವು ದಿನಗಳಿಂದ ಚರ್ಚೆಗಳು ನಡೆಯುತ್ತಿದ್ದರು. ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ, ಕೊನೆಗೆ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ವಿವಿಧ ಸಮುದಾಯಗಳೊಂದಿಗೆ ಹೊಂದಿರುವ ಸಂಪರ್ಕವನ್ನು ಪರಿಗಣಿಸಿ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರ ಮೇಲೆ ವಿಶ್ವಾಸ ವ್ಯಕ್ತಪಡಿಸಿದೆ ಎನ್ನಲಾಗಿದೆ. ವರದಿ ಸುದ್ದಿ ಲೈವ್ ಡಾಟ್ ಕಾಮ್ 


ಬಿ.ಕೆ. ಹರಿಪ್ರಸಾದ್ ಅವರ ನೇಮಕದ ಮೂಲಕ ಸರ್ಕಾರ ಮತ್ತು ಪಕ್ಷದ ಸಂಘಟನೆಯನ್ನು ಪ್ರತ್ಯೇಕವಾಗಿ ಬಲಪಡಿಸುವ ಸಂದೇಶವನ್ನು ಕಾಂಗ್ರೆಸ್ ನೀಡಿದೆ. ಮುಂದಿನ ವಿಧಾನಸಭಾ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ಇದೀಗ ಅವರ ಹೆಗಲ ಮೇಲೆ ಬಂದಿದೆ.


ಕಾಂಗ್ರೆಸ್ ಹೈಕಮಾಂಡ್ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ (CWC) ನೇಮಕ ಮಾಡಿದ್ದು, ಇದೀಗ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಸಮೀಕರಣ ರೂಪಿಸಿದೆ. ವರದಿ ಸುದ್ದಿ ಲೈವ್ ಡಾಟ್ ಕಾಮ್ 


ಬಿಲ್ಲವ ಸಮುದಾಯದ ಪ್ರಮುಖ ಮುಖಂಡರಾಗಿರುವ ಬಿ.ಕೆ. ಹರಿಪ್ರಸಾದ್ ಅವರ ನೇಮಕದಿಂದ ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಪುನರ್‌ವ್ಯವಸ್ಥೆಗೊಳಿಸಿ, ಮುಂದಿನ ಚುನಾವಣಾ ಸವಾಲುಗಳಿಗೆ ಕಾಂಗ್ರೆಸ್ ಅನ್ನು ಸಜ್ಜುಗೊಳಿಸುವ ನಿರೀಕ್ಷೆ ಅವರ ಮೇಲಿದ್ದು, ರಾಜ್ಯ ರಾಜಕೀಯದಲ್ಲಿ ಈ ನೇಮಕಾತಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.


📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default