}

ಮಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಜಾತಿ ನಿಂದನೆ, ಅವಾಚ್ಯ ಕಾಮೆಂಟ್ ಅಟ್ರಾಸಿಟಿ ಪ್ರಕರಣ ದಾಖಲು

suddilive.com
By -
0
Police register a case in Mangaluru over alleged abusive social media comments against Priyank Kharge and the Dalit community.

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದಲಿತ ಸಮುದಾಯಕ್ಕೆ ಅಪಮಾನಿಸಿದ ಆರೋಪಿ ವಿರುದ್ಧ ಮಂಗಳೂರಿನಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜೂನ್ 7 ರಂದು ಫೇಸ್‌ಬುಕ್‌ನ “ನಮ್ಮ ಕರಾವಳಿ” ಪೇಜ್‌ನಲ್ಲಿ ಮೂಡಿಬಂದ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಆರೋಪಿ ಸಂತೋಷ್ ಶೆಟ್ಟಿ, ಸಚಿವರ ಘನತೆಗೆ ಕುಂದು ತರುವಂತೆ ಕಮೆಂಟ್ ಮಾಡಿದ್ದ. ಅಲ್ಲದೆ ಪರಿಶಿಷ್ಟ ಜಾತಿ ಸಮುದಾಯದ ವಿರುದ್ಧ ಜಾತಿ ನಿಂದನಾತ್ಮಕ ಪದ ಬಳಸಿ ಸಾರ್ವಜನಿಕ ಸೌಹಾರ್ದತೆಗೆ ಧಕ್ಕೆ ತಂದಿದ್ದ.


ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್‌ಸಿ/ಎಸ್‌ಟಿ ಘಟಕದ ಅಧ್ಯಕ್ಷ ದಿನೇಶ್ ಮೂಳೂರು ನೀಡಿದ ದೂರಿನನ್ವಯ ಉರ್ವಾ ಪೊಲೀಸರು ಜೂನ್ 8ರ ರಾತ್ರಿ 8.20ಕ್ಕೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.


ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 353(2), 352 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ (SC/ST Act) ಕಲಂ 3(1)(r) ಅಡಿಯಲ್ಲಿ ಮೊಕದ್ದಮೆ ಹೂಡಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default