ಬೆಳ್ತಂಗಡಿ, ಜೂನ್ 13: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಬೆನ್ನಲ್ಲೇ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ನೇತೃತ್ವದ ತಂಡವು ಬೆಳ್ತಂಗಡಿಯ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ.
ಶುಕ್ರವಾರ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತೆರಳಿದ ತಂಡವು, ಪ್ರಕರಣದ ಆರೋಪಿ ಚಿನ್ನಯ್ಯ ಅವರಿಗೆ ಪೊಲೀಸ್ ಭದ್ರತೆ ಒದಗಿಸಬೇಕು ಹಾಗೂ ಅವರನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದೆ. ಅಲ್ಲದೆ, ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಗಳ ವಿಷಯವನ್ನು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುವುದು ಜಾಮೀನು ಷರತ್ತು ಉಲ್ಲಂಘನೆಯಾಗಬಹುದು ಎಂದು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಚಿನ್ನಯ್ಯ ಅವರ ಜಾಮೀನು ರದ್ದತಿಗೆ ಎಸ್‌ಐಟಿ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಕುರಿತು ಕ್ರಮ ಕೈಗೊಳ್ಳಬೇಕೆಂದು ತಂಡವು ಆಗ್ರಹಿಸಿದೆ.
ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣವರ್, “ನೇರ ಪ್ರಸಾರದ ಮೂಲಕ ನನ್ನನ್ನೂ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬಹುದು” ಎಂದು ಪ್ರತಿಕ್ರಿಯಿಸಿದರು.
ಈ ಸಂದರ್ಭದಲ್ಲಿ ಜಯಂತ್ ಟಿ ಅವರೊಂದಿಗೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ, ಪ್ರಕಾಶ್ ಸಿ (ಬೆಂಗಳೂರು), ಮನೋಜ್ ಕುಂಜರ್ಪ, ಪ್ರದೀಪ್ ಕುಲಾಲ್, ಗಣೇಶ್ ಶೆಟ್ಟಿ, ಉದಯ ಉಜಿರೆ, ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

