}

"ಹೆಸರಿನಲ್ಲಿ ಶಿವ ಇದ್ದರೆ ಸಾಲದು; ಧರ್ಮಸ್ಥಳ ಅವಹೇಳನಕಾರರನ್ನು ಜೈಲಿಗೆ ಹಾಕಿ" – ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

suddilive.com
By -
0
Karkala MLA Sunil Kumar demanding release of SIT report on Dharmasthala case

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ವರದಿಯನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಕಾರ್ಕಳ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.


ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ರಚನೆಯಾಗಿ ಹಲವು ತಿಂಗಳುಗಳು ಕಳೆದಿದ್ದರೂ ತನಿಖಾ ವರದಿ ಇನ್ನೂ ಬಹಿರಂಗಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕರಣದ ಹಿಂದೆ ಯಾರ ಪಾತ್ರವಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕೆಂದು ಅವರು ಆಗ್ರಹಿಸಿದರು.


ಧರ್ಮಸ್ಥಳದಂತಹ ಪ್ರಸಿದ್ಧ ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಉದ್ದೇಶಪೂರ್ವಕವಾಗಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಸುನಿಲ್ ಕುಮಾರ್, ಈ ಸಂಬಂಧ ನ್ಯಾಯಾಲಯದ ಮುಂದೆ ಆರೋಪಿಯೊಬ್ಬ ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.


ಎಸ್‌ಐಟಿ ಮುಂದೆ ಹೇಳದಿದ್ದ ವಿಚಾರಗಳನ್ನು ಆರೋಪಿ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವುದು ತನಿಖೆಯ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎಸ್‌ಐಟಿ ಯಾವ ರೀತಿಯಲ್ಲಿ ತನಿಖೆ ನಡೆಸಿತು, ಅದರ ಹಿಂದೆ ಯಾವುದಾದರೂ ಸಂಚು ಅಥವಾ ಉದ್ದೇಶಿತ ಯೋಜನೆ ಇದೆಯೇ ಎಂಬ ವಿಚಾರಗಳು ಸಾರ್ವಜನಿಕ ಚರ್ಚೆಗೆ ಬರಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.


ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಸುನಿಲ್ ಕುಮಾರ್, ಧರ್ಮಸ್ಥಳದ ಕುರಿತು ಅವಹೇಳನಕಾರಿ ಹೇಳಿಕೆಗಳು ಅಥವಾ ಅಪಪ್ರಚಾರ ನಡೆದಿದ್ದರೆ ಸಂಬಂಧಪಟ್ಟವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಾಗಿತ್ತು ಎಂದು ಹೇಳಿದರು.


ಮುಖ್ಯ‌ಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಹೆಸರಿನಲ್ಲಿ ಶಿವ ಅಂತ ಇಟ್ಟುಕೊಂಡರೆ ಆಗುವುದಿಲ್ಲ. ಧರ್ಮಸ್ಥಳದ ಬಗ್ಗೆ ಯಾರು ಅವಹೇಳನ ಮಾಡಿದ್ದಾರೋ ಅವರನ್ನು ರಾಜ್ಯ ಸರ್ಕಾರ ಒದ್ದು ಒಳಗೆ ಹಾಕಬೇಕಿತ್ತು ಎಂದೂ ಸುನೀಲ್ ಕುಮಾರ್ ಹೇಳಿದ್ದಾರೆ.


About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default