}

ಜೆಡಿಎಸ್ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಗಾಳ, ನನ್ನ ಮನೆಯ ಬಾಗಿಲು ಸದಾ ತೆರೆದಿದೆ ಮುಖ್ಯಮಂತ್ರಿ

suddilive.com
By -
0

 ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ತಮ್ಮ ತವರು ಕ್ಷೇತ್ರ ಕನಕಪುರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃತಜ್ಞತಾ ಸಮರ್ಪಣಾ ಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಾರೋಹಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರವಲ್ಲದೆ, ಜೆಡಿಎಸ್ ಕಾರ್ಯಕರ್ತರಿಗೂ ತಮ್ಮ ಮನೆಯ ಬಾಗಿಲು ಸದಾ ತೆರೆದಿರುತ್ತದೆ ಎಂದು ತಿಳಿಸಿದ್ದಾರೆ.



ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಹಿಂದೆ ತಾವು ಅನಿತಾ ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದ್ದಾಗಿ ಸ್ಮರಿಸಿದ ಅವರು, ಆ ಬಳಿಕ ನಡೆದ ಘಟನೆಗಳ ಬಗ್ಗೆ ಚರ್ಚಿಸಲು ಇಚ್ಛಿಸುವುದಿಲ್ಲ ಎಂದರು. ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಜನರ ಋಣ ತೀರಿಸುವ ಕೆಲಸ ಮಾಡಬೇಕಿದೆ. ನಾನು ಮುಖ್ಯಮಂತ್ರಿಯಾಗಿರಬಹುದು, ಆದರೆ ನಿಮ್ಮ ಮನೆಯ ಮಗ ಮತ್ತು ಈ ತಾಲ್ಲೂಕಿನ ಸೇವಕನಾಗಿ ಮುಂದುವರಿಯುತ್ತೇನೆ. 2028ರ ಚುನಾವಣೆಯಲ್ಲೂ ಜನರ ಆಶೀರ್ವಾದ ಅಗತ್ಯ ಎಂದು ಅವರು ಮನವಿ ಮಾಡಿಕೊಂಡರು.



ಬೆಂಗಳೂರು ದಕ್ಷಿಣ ಜಿಲ್ಲೆಯ ನಾಮಕರಣದಿಂದಾಗಿ ಜಮೀನಿನ ಮೌಲ್ಯ ಹೆಚ್ಚಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಜಿಲ್ಲೆಯ ಹೆಸರು ಬದಲಾವಣೆಯಾದ ಹಿನ್ನೆಲೆಯಲ್ಲಿ ಈ ಭಾಗದ ಅಭಿವೃದ್ಧಿಗಾಗಿ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲಾಗುವುದು ಮತ್ತು ಜನರ ಸಮಸ್ಯೆಗಳನ್ನು ಆಲಿಸಲು ವಿಶೇಷ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಅವರು ಭರವಸೆ ನೀಡಿದರು.



ರೈತರು ಕೃಷಿಯನ್ನು ಕೈಬಿಡಬಾರದು ಎಂದು ಕಿವಿಮಾತು ಹೇಳಿದ ಮುಖ್ಯಮಂತ್ರಿಗಳು, ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಲಾಗುವುದು ಮತ್ತು ರೇಷ್ಮೆ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಜಿಲ್ಲೆಯಲ್ಲಿ ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಲಾಗುವುದು. ಕೈಗಾರಿಕಾ ವಲಯದಲ್ಲಿ ಕೆಲಸ ಮಾಡುವವರು ಸಂಘಟನೆ ಅಥವಾ ಪ್ರತಿಭಟನೆಗಳ ಮೂಲಕ ತೊಂದರೆ ನೀಡದೆ, ಕೈಗಾರಿಕೆಗಳು ಇಲ್ಲಿಯೇ ಉಳಿಯುವಂತೆ ನೋಡಿಕೊಳ್ಳಬೇಕೆಂದು ಕೋರಿದರು.



ಕಷ್ಟದ ಕಾಲದಲ್ಲಿ ಜಿಲ್ಲೆಯ ಜನತೆ ತಮ್ಮ ಜೊತೆಗಿದ್ದರು ಎಂದು ನೆನಪಿಸಿಕೊಂಡ ಅವರು, ನಿಮ್ಮೆಲ್ಲರ ಪ್ರಾರ್ಥನೆಯ ಫಲವಾಗಿ ಇಂದು ತಮಗೆ ಈ ಅವಕಾಶ ಸಿಕ್ಕಿದೆ ಎಂದರು. ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಅವರನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಸಲ್ಲಿಸಿದ ಅವರು, ರಾಜಕೀಯದ ಕುರಿತು ಅನಗತ್ಯ ಮಾತುಗಳನ್ನು ಆಡದಂತೆ ಈ ಹಿಂದೆ ಇಕ್ಬಾಲ್ ಅವರಿಗೆ ಹಲವು ಬಾರಿ ಸೂಚಿಸಿದ್ದನ್ನು ಹಾಸ್ಯಮಯವಾಗಿ ಪ್ರಸ್ತಾಪಿಸಿದರು.



ರಾಮನಗರ ಮತ್ತು ಹಾರೋಹಳ್ಳಿಯಲ್ಲಿ ಎಲ್ಲರಿಗೂ ವಸತಿ ಮತ್ತು ನಿವೇಶನ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಶಂಕುಸ್ಥಾಪನೆಯನ್ನು ತಾವೇ ನೆರವೇರಿಸುವುದಾಗಿ ಘೋಷಿಸಿದರು. ಆಶ್ರಯ, ಆರೋಗ್ಯ ಮತ್ತು ಶಿಕ್ಷಣಕ್ಕೆ ತಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಿದೆ. ಜಿಲ್ಲೆಯ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ಸ್ಥಳೀಯವಾಗಿಯೇ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ವಿಧಾನಸೌಧದಲ್ಲಿ ಆಸೀನನಾಗಲು ಆಶೀರ್ವದಿಸಿದ ಜಿಲ್ಲೆಯ ಜನರ ಋಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ಭಾವುಕರಾಗಿ ನುಡಿದರು.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default