ಮಂಗಳೂರು: ನಗರದಲ್ಲಿ ಹೋಟೆಲ್‌ಗಳು ಮತ್ತು ಆಹಾರ ಮಳಿಗೆಗಳು ನಿಗದಿತ ಸಮಯ ಮೀರಿಸಿ ಕಾರ್ಯನಿರ್ವಹಿಸುತ್ತಿರುವ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ನಗರದಲ್ಲಿ ಹೋಟೆಲ್‌ಗಳು ರಾತ್ರಿ 11.30 ಗಂಟೆಯವರೆಗೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಪರವಾನಗಿ ಹೊಂದಿರುವ ಕೆಲವು ಸಂಸ್ಥೆಗಳು ಮಧ್ಯರಾತ್ರಿ 12 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ಹೊಂದಿದ್ದರೂ, ಹಲವು ಹೋಟೆಲ್‌ಗಳು ಈ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಿ ರಾತ್ರಿ 3 ಗಂಟೆಯವರೆಗೆ ವ್ಯಾಪಾರ ನಡೆಸುತ್ತಿವೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಸನ್ನ ರವಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಳೆದ ಐದು ದಿನಗಳಿಂದ ಸ್ವತಃ ರಾತ್ರಿ ವೇಳೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು. ಈ ವೇಳೆ ಅನೇಕ ಹೋಟೆಲ್‌ಗಳು ಹಾಗೂ ಊಟದ ಮಳಿಗೆಗಳು ನಿಗದಿತ ಸಮಯ ಮೀರಿಯೂ ಗ್ರಾಹಕರಿಗೆ ಸೇವೆ ಒದಗಿಸುತ್ತಿರುವುದು ಕಂಡುಬಂದಿದೆ ಎಂದು ಅವರು ದೂರಿದರು. ನಿಯಮಗಳನ್ನು ಪಾಲಿಸಬೇಕಾದ ಸಂಸ್ಥೆಗಳೇ ಕಾನೂನು ಉಲ್ಲಂಘಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದರು.
ಇದೇ ವೇಳೆ ನಗರದ ಪ್ರಮುಖ ಹೋಟೆಲ್‌ಗಳಲ್ಲಿ ಒಂದಾದ 'ಎಂಪೈರ್' ಹೋಟೆಲ್ ವಿರುದ್ಧವೂ ಪ್ರಸನ್ನ ರವಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹೋಟೆಲ್‌ನ ನೆಲಮಾಳಿಗೆಯಲ್ಲಿ ಅಕ್ರಮವಾಗಿ ವ್ಯಾಪಾರ ನಡೆಸಲಾಗುತ್ತಿದ್ದು, ಪೊಲೀಸ್ ವಾಹನಗಳು ಆಗಮಿಸಿದಾಗ ಮುಂಭಾಗದ ಪ್ರವೇಶ ದ್ವಾರವನ್ನು ಮುಚ್ಚಿ, ಪಾರ್ಕಿಂಗ್ ಪ್ರದೇಶದ ಮೂಲಕ ಗ್ರಾಹಕರಿಗೆ ಒಳನುಗ್ಗುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಹೋಟೆಲ್‌ನಲ್ಲಿ ನಿಯಮಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಕುರಿತು ಮಾಹಿತಿ ಪಡೆದ ಬಳಿಕ ಪೊಲೀಸರನ್ನು ಒಳಗೆ ಕಳುಹಿಸಲಾಗಿತ್ತು. ಈ ವೇಳೆ ಅಲ್ಲಿದ್ದ ಹಲವರು ತಕ್ಷಣವೇ ಸ್ಥಳವನ್ನು ತೊರೆದಿದ್ದಾರೆ ಎಂದು ಅವರು ಹೇಳಿದರು. ಕೆಲವು ಸಂದರ್ಭಗಳಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗಳು ಪೊಲೀಸರೊಂದಿಗೆ ವಾಗ್ವಾದ ನಡೆಸಿರುವ ಘಟನೆಗಳೂ ನಡೆದಿವೆ ಎಂದು ಆರೋಪಿಸಿದರು.
ನಗರದಲ್ಲಿ ನಡೆಯುತ್ತಿರುವ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಸಮರ್ಪಕ ಕ್ರಮ ಕೈಗೊಳ್ಳದಿರುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿಯೂ ಪ್ರಶ್ನೆಗಳು ಕೇಳಿಬರುತ್ತಿವೆ ಎಂದು ಪ್ರಸನ್ನ ರವಿ ಹೇಳಿದರು. ಕೆಳಮಟ್ಟದಲ್ಲಿ ನಡೆಯುತ್ತಿರುವ ಎನ್ನಲಾದ 'ಹಪ್ತಾ' ವ್ಯವಸ್ಥೆಯ ಕಾರಣದಿಂದಲೇ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕರಿಂದ ವ್ಯಕ್ತವಾಗುತ್ತಿವೆ ಎಂದು ಅವರು ತಿಳಿಸಿದರು.
ನಗರದಲ್ಲಿ ಕಾನೂನು ಮತ್ತು ನಿಯಮಗಳ ಪರಿಣಾಮಕಾರಿ ಜಾರಿ ನಡೆಯಬೇಕಾದರೆ ಸಂಬಂಧಪಟ್ಟ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸುವ ಹೋಟೆಲ್‌ಗಳು ಹಾಗೂ ಸಂಸ್ಥೆಗಳ ವಿರುದ್ಧ ತಕ್ಷಣ ತನಿಖೆ ನಡೆಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಪ್ರಸನ್ನ ರವಿ ಆಗ್ರಹಿಸಿದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

