ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಮಧ್ಯಾಹ್ನ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅವರು ದೇವಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿಯ ಖಡ್ಗ ಹಾಗೂ ಸೀರೆಯನ್ನು ಸಮರ್ಪಿಸಿದರು.
ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಕೊಲ್ಲೂರಿಗೆ ತೆರಳಿದರು. ದೇವಸ್ಥಾನಕ್ಕೆ ಭೇಟಿ ನೀಡುವ ಮೊದಲು ಅವರು ಪ್ರವಾಸಿ ಮಂದಿರದಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದರು.
ಕೆಂಪು ಬಣ್ಣದ ಶಲ್ಯ ಧರಿಸಿದ್ದ ವಿಜಯ್ ಅವರನ್ನು ದೇವಸ್ಥಾನದ ಅರ್ಚಕರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು. ದೇವಾಲಯ ಪ್ರವೇಶಿಸುವ ವೇಳೆ ವಿಜಯ್ ಅವರು ಭಕ್ತರು ಹಾಗೂ ಸಾರ್ವಜನಿಕರಿಗೆ ಕೈಮುಗಿದು ವಂದನೆ ಸಲ್ಲಿಸಿದರು.
ದೇವಾಲಯದ ಒಳಗೆ ವಿಶೇಷ ಮಂತ್ರೋಚ್ಚಾರಣೆಗಳ ನಡುವೆ ಪೂಜೆ ಹಾಗೂ ಪ್ರಾರ್ಥನೆಗಳು ನಡೆದವು. ಅರ್ಚಕರು ವಿಜಯ್ ಅವರ ಕೈಗೆ ರಕ್ಷಾ ದಾರವನ್ನು ಕಟ್ಟಿ ಆಶೀರ್ವದಿಸಿದರು. ಸುಮಾರು ಅರ್ಧ ಗಂಟೆ ಕಾಲ ಅವರು ದೇವಾಲಯದ ಆವರಣದಲ್ಲಿ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
**ಅಭಿಮಾನಿಗಳ ಕಾತರ, ಕಟ್ಟೆಚ್ಚರದ ಭದ್ರತೆ**
ಜನಪ್ರಿಯ ನಟ ಹಾಗೂ ಮುಖ್ಯಮಂತ್ರಿ ವಿಜಯ್ ಅವರನ್ನು ನೋಡುವ ಉತ್ಸಾಹದಲ್ಲಿ ವಿವಿಧ ಭಾಗಗಳಿಂದ ಅಭಿಮಾನಿಗಳು ಮತ್ತು ಸಾರ್ವಜನಿಕರು ದೇವಸ್ಥಾನದ ಬಳಿ ಜಮಾಯಿಸಿದ್ದರು. ಭದ್ರತಾ ದೃಷ್ಟಿಯಿಂದ ದೊಡ್ಡ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದ ಪೊಲೀಸರು ಜನಸಂದಣಿಯನ್ನು ನಿಯಂತ್ರಿಸಿದರು.
ಮಧ್ಯಾಹ್ನ 1 ಗಂಟೆಯಿಂದಲೇ ಹಲವರು ದೇವಸ್ಥಾನದ ಸುತ್ತಮುತ್ತ ಕಾಯುತ್ತಿದ್ದು, ಕೆಲವರು ಮರಗಳು ಹಾಗೂ ಕಟ್ಟಡಗಳ ಮೇಲೇರಿ ವಿಜಯ್ ಅವರನ್ನು ನೋಡುವ ಪ್ರಯತ್ನ ನಡೆಸಿದರು. ಮಳೆಯ ನಡುವೆಯೂ ಅಭಿಮಾನಿಗಳ ಉತ್ಸಾಹ ಕಡಿಮೆಯಾಗಿರಲಿಲ್ಲ. ಟಿವಿಕೆ ಪಕ್ಷದ ಬೆಂಬಲಿಗರು ಪಕ್ಷದ ಚಿಹ್ನೆಯಾದ ವಿಶಲ್ ಊದುತ್ತಾ ವಿಜಯ್ ಪರ ಘೋಷಣೆಗಳನ್ನು ಕೂಗಿದರು.
ಜೋಸೆಫ್ ವಿಜಯ್ ಅವರು ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿರುವುದು ವಿಶೇಷವಾಗಿದೆ. ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿಗಳಾದ ಎಂ.ಜಿ. ರಾಮಚಂದ್ರನ್ ಹಾಗೂ ಜಯಲಲಿತಾ ಕೂಡ ಇದೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದರು.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

