}

ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ರಾಜಿ ಸಂಧಾನಕ್ಕೆ ಹಿರಿಯ ವಕೀಲೆ ಎಸ್. ಸುಶೀಲಾ ನೇಮಕ

suddilive.com
By -
0
Senior advocate S Sushila appointed as mediator by Karnataka High Court in Krishna J Rao case

ಪುತ್ತೂರು ಮೂಲದ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಸಂಧಾನದ ಮೂಲಕ ವಿವಾದ ಬಗೆಹರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮತ್ತೊಂದು ಹೆಜ್ಜೆ ಇಟ್ಟಿದ್ದು, ಮಧ್ಯಸ್ಥಿಕೆದಾರರಾಗಿ ಪದಾಂಕಿತ ಹಿರಿಯ ವಕೀಲೆ ಎಸ್. ಸುಶೀಲಾ ಅವರನ್ನು ನೇಮಕ ಮಾಡಿದೆ.


ಪ್ರೀತಿಸಿ ವಿವಾಹವಾಗುವುದಾಗಿ ನಂಬಿಕೆ ಮೂಡಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದು, ಬಳಿಕ ಮಗುವಿಗೆ ಜನ್ಮ ನೀಡಿದ ನಂತರ ವಂಚನೆ ಎಸಗಲಾಗಿದೆ ಎಂಬ ಆರೋಪದಡಿ ಕೃಷ್ಣ ಜೆ. ರಾವ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.


ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದ ವೇಳೆ, ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು ಪ್ರಕರಣವನ್ನು ಪರಸ್ಪರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಸಾಧ್ಯತೆಯನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದರು.


ಈ ಪ್ರಸ್ತಾವನೆಯನ್ನು ಪರಿಗಣಿಸಿದ್ದ ನ್ಯಾಯಪೀಠವು, ಜೂನ್ 19ರಂದು ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರರು ಕಡ್ಡಾಯವಾಗಿ ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗುವಂತೆ ಸೂಚಿಸಿ, ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಿತ್ತು.


ಇದೀಗ ರಾಜಿ ಸಂಧಾನ ಪ್ರಕ್ರಿಯೆಯನ್ನು ಸುಗಮಗೊಳಿಸುವ ಉದ್ದೇಶದಿಂದ, ಪದಾಂಕಿತ ಹಿರಿಯ ವಕೀಲೆ ಎಸ್. ಸುಶೀಲಾ ಅವರನ್ನು ಅಧಿಕೃತ ಮಧ್ಯಸ್ಥಿಕೆದಾರರಾಗಿ ಹೈಕೋರ್ಟ್ ನೇಮಿಸಿದೆ.


About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default