}

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವಘಡ: ನಿಯಂತ್ರಣ ತಪ್ಪಿದ ಕಾರು ಸ್ಕೂಟರ್ ನುಜ್ಜುಗುಜ್ಜು

suddilive.com
By -
0

Overturned car after crashing into a milestone and electric scooter near Katapady Forest Gate on National Highway 66 in Kaapu.


ಕಾಪು, ಜೂ. ೧: ಅತಿವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ರಸ್ತೆ ಬದಿಯ ಮೈಲಿಗಲ್ಲು ಹಾಗೂ ನಿಲ್ಲಿಸಿದ್ದ ವಿದ್ಯುತ್ ಚಾಲಿತ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸೋಮವಾರ ಬೆಳಗ್ಗೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.


ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರು ಅತಿವೇಗದಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದೆ ಎಂದು ತಿಳಿದುಬಂದಿದೆ. ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ಬದಿಯಲ್ಲಿದ್ದ ಮೈಲಿಗಲ್ಲಿಗೆ ಭಾರೀ ವೇಗದಲ್ಲಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಮೈಲಿಗಲ್ಲು ಸಂಪೂರ್ಣ ಕಿತ್ತು ಬಿದ್ದಿದ್ದು, ಬಳಿಕ ಕಾರು ಅಲ್ಲೇ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಇಲೆಕ್ಟ್ರಿಕ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.


ಅಪಘಾತದ ತೀವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರು ಸಹ ಭಾರೀ ಹಾನಿಗೊಳಗಾಗಿ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ವರದಿ ಸುದ್ದಿ ಲೈವ್ ಡಾಟ್ ಕಾಮ್ 


ಅಪಘಾತದಲ್ಲಿ ಕಾರು ಚಾಲಕ ಗಂಗೊಳ್ಳಿ ಮೂಲದ ಮುಹಮ್ಮದ್ ಝೈನ್ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.


ವರದಿ ಸುದ್ದಿ ಲೈವ್ ಡಾಟ್ ಕಾಮ್ 

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default