}

No title

suddilive.com
By -
0

ಮಂಗಳೂರು: ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ರಾಜಿ ಸಂಧಾನದ ಸಾಧ್ಯತೆ ಕಾಣಿಸಿಕೊಂಡಿದೆ. ಈ ಸಂಬಂಧ ಆರೋಪಿಯ ಪರ ವಕೀಲರು ಹೈಕೋರ್ಟ್‌ನಲ್ಲಿ ರಾಜಿ ಸಂಧಾನಕ್ಕೆ ಸಿದ್ಧತೆ ವ್ಯಕ್ತಪಡಿಸಿದ್ದು, ಜೂನ್ 19ರಂದು ನಡೆಯಲಿರುವ ಮಧ್ಯಸ್ಥಿಕೆ ಪ್ರಕ್ರಿಯೆಯಲ್ಲಿ ಪ್ರಕರಣಕ್ಕೆ ಪರಿಹಾರ ದೊರೆಯುವ ವಿಶ್ವಾಸವಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ತಿಳಿಸಿದ್ದಾರೆ.


ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಆರೋಪಿಯ ಪರ ವಕೀಲ ಪಿ.ಪಿ. ಹೆಗ್ಡೆ ಅವರು ಪ್ರಕರಣವನ್ನು ಪರಸ್ಪರ ಒಪ್ಪಂದದ ಮೂಲಕ ಇತ್ಯರ್ಥಪಡಿಸಲು ಸಿದ್ಧವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಲಯವು ಸಂತ್ರಸ್ತೆ ಹಾಗೂ ಆರೋಪಿಯ ಕುಟುಂಬದವರು ಜೂನ್ 19ರಂದು ಮಧ್ಯಸ್ಥಿಕೆ ಕೇಂದ್ರಕ್ಕೆ ಹಾಜರಾಗುವಂತೆ ಸೂಚಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ನಿಗದಿಪಡಿಸಿದೆ.


ಇದರೊಂದಿಗೆ, ಸಂತ್ರಸ್ತೆ ಮತ್ತು ಮಗುವಿನ ಆರೈಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಠೇವಣಿ ಇಡಲಾಗಿದ್ದ ₹75,000 ಮೊತ್ತವನ್ನು ಸಂತ್ರಸ್ತೆಗೆ ಬಿಡುಗಡೆ ಮಾಡಬೇಕು ಹಾಗೂ ಎರಡನೇ ಕಂತಿನ ಹಣವನ್ನು ನಾಲ್ಕು ದಿನಗಳೊಳಗೆ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.


ಪ್ರಕರಣದ ಹಿನ್ನೆಲೆಯಲ್ಲಿ ಎರಡೂ ಕುಟುಂಬಗಳು ಮಾನಸಿಕ ಹಾಗೂ ಸಾಮಾಜಿಕ ಒತ್ತಡವನ್ನು ಅನುಭವಿಸಿದ್ದು, ರಾಜಿ ಸಂಧಾನದ ಮೂಲಕ ಸಂತ್ರಸ್ತೆ ಹಾಗೂ ಮಗುವಿಗೆ ಅಗತ್ಯ ಭದ್ರತೆ ಮತ್ತು ಸ್ಥಿರತೆ ದೊರೆಯುವ ನಿರೀಕ್ಷೆ ಇದೆ ಎಂದು ಕೆ.ಪಿ. ನಂಜುಂಡಿ ಹೇಳಿದರು. ಈ ಹಿನ್ನೆಲೆಯಲ್ಲಿ ಜೂನ್ 17ರಂದು ನಿಗದಿಯಾಗಿದ್ದ ಮಗುವಿನ ನಾಮಕರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದರು.


ರಾಜಿ ಸಂಧಾನಕ್ಕೆ ಮುಂದಾಗಿರುವ ಆರೋಪಿಯ ಕುಟುಂಬದ ನಿರ್ಧಾರವನ್ನು ಸ್ವಾಗತಿಸಿದ ಅವರು, ಇಂತಹ ಸಂದರ್ಭಗಳು ಯಾವುದೇ ಕುಟುಂಬದಲ್ಲಿ ಮರುಕಳಿಸದಂತೆ ಯುವಜನರು ತಮ್ಮ ಜೀವನದ ನಿರ್ಣಯಗಳಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.


ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.



About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default