ಮಲ್ಪೆ, ಜೂ. 4: ಅಕ್ರಮವಾಗಿ ಅನಿಲ ಸಿಲಿಂಡರ್‌ಗಳನ್ನು ದಾಸ್ತಾನು ಇರಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿ, ಪರವಾನಿಗೆ ಇಲ್ಲದೆ ಸಂಗ್ರಹಿಸಿಟ್ಟಿದ್ದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಆಹಾರ ನಿರೀಕ್ಷಕರಾದ ಹಿತೇಶ್ ಯು.ಇ. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಕೊಡವೂರು ಗ್ರಾಮದ ಮಲ್ಪೆ ಜಂಕ್ಷನ್ ಸಮೀಪದಲ್ಲಿರುವ ಸನತ್ ಕಾಮತ್ ಅವರ ನಿವಾಸಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಯಾವುದೇ ಅಧಿಕೃತ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ವಾಣಿಜ್ಯ ಅನಿಲ ಸಿಲಿಂಡರ್‌ಗಳನ್ನು ದಾಸ್ತಾನು ಇರಿಸಲಾಗಿರುವುದು ಬೆಳಕಿಗೆ ಬಂದಿದೆ.
ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ 19 ಕೆ.ಜಿ. ಸಾಮರ್ಥ್ಯದ 12 ವಾಣಿಜ್ಯ ಅನಿಲ ಸಿಲಿಂಡರ್‌ಗಳು ಹಾಗೂ 5 ಕೆ.ಜಿ. ಸಾಮರ್ಥ್ಯದ 9 ವಾಣಿಜ್ಯ ಸಿಲಿಂಡರ್‌ಗಳು ಪತ್ತೆಯಾಗಿದ್ದು, ಒಟ್ಟು 21 ಸಿಲಿಂಡರ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ವಿಚಾರಣೆ ವೇಳೆ ಈ ಸಿಲಿಂಡರ್‌ಗಳನ್ನು ಮೀನುಗಾರಿಕಾ ಚಟುವಟಿಕೆಗಳಿಗೆ ಬಳಸುವವರಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದಾಗಿ ಸನತ್ ಕಾಮತ್ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ. ಆದರೆ ಸಿಲಿಂಡರ್‌ಗಳ ಖರೀದಿ, ಸಂಗ್ರಹಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಯಾವುದೇ ಮಾನ್ಯ ಪರವಾನಿಗೆ ಅಥವಾ ದಾಖಲೆಗಳನ್ನು ಅವರು ಒದಗಿಸಲು ವಿಫಲರಾಗಿದ್ದಾರೆ.
ಅಗತ್ಯ ದಾಖಲೆಗಳ ಕೊರತೆ ಹಾಗೂ ನಿಯಮ ಉಲ್ಲಂಘನೆಯ ಹಿನ್ನೆಲೆ ಅಧಿಕಾರಿಗಳು ಎಲ್ಲಾ ಸಿಲಿಂಡರ್‌ಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಅಕ್ರಮವಾಗಿ ಅನಿಲ ಸಿಲಿಂಡರ್‌ಗಳ ಸಂಗ್ರಹಣೆ ಮತ್ತು ಮಾರಾಟ ಸಾರ್ವಜನಿಕ ಸುರಕ್ಷತೆಗೆ ಅಪಾಯಕಾರಿಯಾಗಿರುವುದರಿಂದ ಇಂತಹ ಚಟುವಟಿಕೆಗಳ ವಿರುದ್ಧ ಇಲಾಖೆ ನಿರಂತರ ನಿಗಾ ವಹಿಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

