ಮಂಗಳೂರು, ಜೂ. 12: ಅಕ್ರಮವಾಗಿ ಆನೆದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮಂಗಳೂರು ನಗರ ಸಮೀಪದ ಪಡೀಲ್ ಗ್ರಾಮದ ಜೋಡುಕಟ್ಟೆ–ಮರೋಳಿ ಪ್ರದೇಶದಲ್ಲಿ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ಮೂಲದ ಶಶಾಂಕ ಪುದುವೆಟ್ಟು, ಮಂಜೇಶ್ವರ ನಿವಾಸಿ ಅಬ್ದುಲ್ ಖಾದರ್ ಹಾಗೂ ಅತ್ತಾವರದ ಪ್ರಭಾಚಂದ್ರ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆದು, ಅವರ ಬಳಿಯಿದ್ದ ಎರಡು ಆನೆದಂತಗಳನ್ನು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಆನೆದಂತಗಳ ಒಟ್ಟು ತೂಕ 42.700 ಕೆಜಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಾರುಗಳನ್ನು ಸಹ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆ ಬೆಂಗಳೂರು ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಪವನ್ ನೆಜ್ಜೂರು (ಐಪಿಎಸ್) ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಮಂಗಳೂರು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ದಿಲೀಪ್ ಜಿ.ಆರ್. ನೇತೃತ್ವದಲ್ಲಿ ತಂಡ ದಾಳಿ ನಡೆಸಿತು.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಜಯರಾಮ ಕೆ.ಟಿ., ಬಾಲಕೃಷ್ಣ ಕೆ.ಎಂ., ತಾರಾನಾಥ್ ಎಸ್. ಹಾಗೂ ಅಬ್ದುಲ್ ರೌಫ್ ಭಾಗವಹಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

