ಬೆಳಗಾವಿ: ಮದುವೆಯಾಗಿ ಕೇವಲ ಒಂದು ತಿಂಗಳಷ್ಟೇ ಕಳೆದಿದ್ದ ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಗರದ ಮಹಾದ್ವಾರ ರಸ್ತೆಯ ಲಕ್ಷ್ಮೀ ಗಲ್ಲಿಯಲ್ಲಿ ನಡೆದಿದೆ.
ಮೃತರನ್ನು ರಕ್ಷಿತಾ ಪೂಜಾರಿ (29) ಎಂದು ಗುರುತಿಸಲಾಗಿದೆ. ರಕ್ಷಿತಾ ಅವರ ವಿವಾಹ ಸುಮಾರು ಒಂದು ತಿಂಗಳ ಹಿಂದೆ ಮಂಜುನಾಥ ಕೃಷ್ಣಾ ಪೂಜಾರಿ ಅವರೊಂದಿಗೆ ನಡೆದಿತ್ತು.
ರಕ್ಷಿತಾ ಖಾಸಗಿ ಸಂಸ್ಥೆಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಮನೆಯಿಂದಲೇ ಕೆಲಸ (ವರ್ಕ್ ಫ್ರಮ್ ಹೋಮ್) ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಜೂನ್ 9ರಂದು ಬೆಳಿಗ್ಗೆ ರಕ್ಷಿತಾ ಅವರು ತಮ್ಮ ತಾಯಿಗೆ ಕರೆ ಮಾಡಿ, ಆ ದಿನ ಮನೆಗೆ ಬರುವುದಿಲ್ಲ ಹಾಗೂ ಪತಿಯ ಮನೆಯಲ್ಲಿ ಉಳಿಯುವುದಾಗಿ ತಿಳಿಸಿದ್ದರು. ಆದರೆ ಬಳಿಕ ಸಂಜೆವರೆಗೂ ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕುಟುಂಬದವರು ಆತಂಕಗೊಂಡಿದ್ದಾರೆ.
ಪರಿಸ್ಥಿತಿ ಅನುಮಾನಾಸ್ಪದವಾಗಿ ಕಂಡುಬಂದ ಕಾರಣ ಕುಟುಂಬದವರು ರಕ್ಷಿತಾ ವಾಸಿಸುತ್ತಿದ್ದ ಮನೆಗೆ ತೆರಳಿದ್ದಾರೆ. ಮನೆಯ ಬಾಗಿಲು ಒಳಗಡೆಯಿಂದ ಲಾಕ್ ಆಗಿರುವುದನ್ನು ಗಮನಿಸಿ ಕಿಟಕಿಯಿಂದ ಒಳಗೆ ನೋಡಿದಾಗ, ರಕ್ಷಿತಾ ಅವರು ಫ್ಯಾನ್‌ಗೆ ದುಪ್ಪಟ್ಟಾ ಸಹಾಯದಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ ಎನ್ನಲಾಗಿದೆ.
ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ತೆರೆಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ರಕ್ಷಿತಾ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಕ್ಷಿತಾ ಅವರು ಪತಿಯ ಮನೆಯಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಜೀವನ ಸಾಗಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಆದರೆ ವೈಯಕ್ತಿಕ ಕಾರಣ ಅಥವಾ ಮನಸ್ಸಿಗೆ ಬೇಸರವಾದ ಯಾವುದಾದರೂ ವಿಷಯದಿಂದ ಈ ಕೃತ್ಯಕ್ಕೆ ಮುಂದಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

