}

ಅಧಿಕಾರಕ್ಕಾಗಿ ಬಿಜೆಪಿ ಸೇರಿಲ್ಲ, ಜನಸೇವೆಗೆ ಬಂದಿದ್ದೇನೆ, ಹುದ್ದೆಗಾಗಿ ಪರಿತಪಿಸುತ್ತಿಲ್ಲ; ಸಾಮಾನ್ಯ ಕಾರ್ಯಕರ್ತನಾಗಿಯೂ ಸೇವೆ ಮುಂದುವರಿಯಲಿದೆ : ಪ್ರಮೋದ್ ಮಧ್ವರಾಜ್

suddilive.com
By -
0
Former Minister Pramod Madhwaraj clarifying rumours about joining Congress and reaffirming loyalty to BJP

 ಉಡುಪಿ: ತಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಸುದ್ದಿ ಸಂಪೂರ್ಣ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಕಾಂಗ್ರೆಸ್ ಬಾಗಿಲು ಬಡಿಯುವ ಬರಗಾಲ ನನಗೆ ಬಂದಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳ ಕುರಿತು ಆಡಿಯೋ ಹೇಳಿಕೆ ಬಿಡುಗಡೆ ಮಾಡಿದ ಅವರು, 'ನಾನು ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕಾಗಿ ಸೇರಿಲ್ಲ. ಜನಸೇವೆಯ ಉದ್ದೇಶದಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಅಧಿಕಾರ ಅಥವಾ ಹುದ್ದೆಗಳು ಬಂದರೆ ಅದು ಹೆಚ್ಚುವರಿ ಜವಾಬ್ದಾರಿಯಷ್ಟೇ. ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ ಮತ್ತು ರಾಜ್ಯದ ಅಭಿವೃದ್ಧಿಯಾಗಿದೆ' ಎಂದು ತಿಳಿಸಿದ್ದಾರೆ.


'ನಾನು ಯಾವುದೇ ಅಧಿಕಾರ ಅಥವಾ ಹುದ್ದೆಗಾಗಿ ಪರಿತಪಿಸುತ್ತಿಲ್ಲ. ಹುದ್ದೆಗಳು ವ್ಯಕ್ತಿಯನ್ನು ದೊಡ್ಡವನನ್ನಾಗಿಸುವುದಿಲ್ಲ. ಜನರ ವಿಶ್ವಾಸ ಮತ್ತು ಸೇವೆಯೇ ವ್ಯಕ್ತಿಯ ನಿಜವಾದ ಶಕ್ತಿಯಾಗಿದೆ ಎಂಬ ನಂಬಿಕೆ ನನ್ನದು. ಅಧಿಕಾರ ಸಿಕ್ಕರೆ ಅದು ಜನರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಮಾತ್ರ ಉಪಯೋಗವಾಗಬೇಕು' ಎಂದು ಹೇಳಿದ್ದಾರೆ


ಪಕ್ಷವು ಯಾವುದೇ ಜವಾಬ್ದಾರಿ ನೀಡಿದರೆ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದ ಅವರು, ಜವಾಬ್ದಾರಿ ಸಿಗದಿದ್ದರೂ ಸಾಮಾನ್ಯ ಕಾರ್ಯಕರ್ತನಾಗಿ ಜನರ ಮಧ್ಯೆ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದರು.


ಪಕ್ಷದ ನಾಯಕರು ತನ್ನ ಕಾರ್ಯ, ನಿಷ್ಠೆ ಹಾಗೂ ಜನಸೇವೆಯ ಬದ್ಧತೆಯನ್ನು ಗುರುತಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ ಅವರು, ತನ್ನ ಮೇಲೆ ವಿಶ್ವಾಸವಿಟ್ಟು ಬೆಂಬಲ ನೀಡುತ್ತಿರುವ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಜನತೆಗೆ ಕೃತಜ್ಞತೆ ಸಲ್ಲಿಸಿದರು.


ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಹಾಗೂ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.







About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default