}

ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ ಬೇಸರ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಸಾಧ್ಯತೆ

suddilive.com
By -
0
Karnataka Minister Ramalinga Reddy reportedly upset over portfolio allocation after missing Bengaluru Development Department

ಬೆಂಗಳೂರು, ಜೂನ್ 4: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಬಳಿಕ ಕಾಂಗ್ರೆಸ್ ಸರ್ಕಾರದ ಒಳಗಿರುವ ಅಸಮಾಧಾನ ಮತ್ತೊಮ್ಮೆ ಬಹಿರಂಗವಾಗುವ ಲಕ್ಷಣಗಳು ಕಾಣಿಸುತ್ತಿವೆ. ಬೆಂಗಳೂರು ನಗರಾಭಿವೃದ್ಧಿ ಖಾತೆಯ ನಿರೀಕ್ಷೆಯಲ್ಲಿದ್ದ ಹಿರಿಯ ಸಚಿವ ರಾಮಲಿಂಗಾ ರೆಡ್ಡಿಗೆ ಜಲಸಂಪನ್ಮೂಲ ಇಲಾಖೆ ಹಂಚಿಕೆ ಮಾಡಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.


ಮೂಲಗಳ ಪ್ರಕಾರ, ಬೆಂಗಳೂರು ನಗರಾಭಿವೃದ್ಧಿ ಖಾತೆ (Bangalore Development) ತಮ್ಮಿಗೆ ನೀಡದಿರುವುದಕ್ಕೆ ಬೇಸರಗೊಂಡಿರುವ ರಾಮಲಿಂಗಾ ರೆಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಅಗತ್ಯವಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.


ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪರಿಸ್ಥಿತಿಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದು, ಖಾತೆ ಹಂಚಿಕೆ ವಿಚಾರದಲ್ಲಿ ತಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ. ಈ ಕುರಿತು ಎಐಸಿಸಿ ನಾಯಕತ್ವದ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಖಾತೆ ಬದಲಾವಣೆಗೆ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


 ಬೆಂಗಳೂರು ನಗರಾಭಿವೃದ್ಧಿ ಖಾತೆಯ ಮೇಲಿದ್ದ ಪಟ್ಟು


ರಾಮಲಿಂಗಾ ರೆಡ್ಡಿ ಅವರು ಹಲವು ವರ್ಷಗಳಿಂದ ಬೆಂಗಳೂರಿನ ರಾಜಕೀಯದಲ್ಲಿ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮ ಅನುಭವ ಮತ್ತು ಪ್ರಭಾವವನ್ನು ಪರಿಗಣಿಸಿ ನಗರಾಭಿವೃದ್ಧಿ ಖಾತೆ ನೀಡುವಂತೆ ಅವರು ಬಲವಾದ ಒತ್ತಾಯ ಮಾಡಿದ್ದರು ಎನ್ನಲಾಗಿದೆ. ಆದರೆ ಕೊನೆಯ ಕ್ಷಣದಲ್ಲಿ ಖಾತೆ ಹಂಚಿಕೆಯಲ್ಲಿ ಬದಲಾವಣೆ ಆಗಿದ್ದು, ಜಲಸಂಪನ್ಮೂಲ ಇಲಾಖೆ ಅವರ ಪಾಲಾಗಿದೆ.


ಇದರಿಂದಾಗಿ ಅವರ ಬೆಂಬಲಿಗರಲ್ಲಿಯೂ ಅಸಮಾಧಾನ ವ್ಯಕ್ತವಾಗಿದ್ದು, ಕಾಂಗ್ರೆಸ್‌ನೊಳಗಿನ ಖಾತೆ ಹಂಚಿಕೆ ಕಸರತ್ತು ಇನ್ನೂ ಸಂಪೂರ್ಣವಾಗಿ ಶಮನವಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.


 ಕಾಂಗ್ರೆಸ್‌ನಲ್ಲಿ ಮುಂದುವರಿದ ಖಾತೆ ಹಂಚಿಕೆ ಕಗ್ಗಂಟು


ಇತ್ತೀಚಿನ ದಿನಗಳಲ್ಲಿ ಹಲವು ಸಚಿವರು ತಮಗೆ ನಿರೀಕ್ಷಿತ ಖಾತೆಗಳು ಸಿಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವುದು ವರದಿಯಾಗಿದೆ. ಅದರಲ್ಲೂ ಬೆಂಗಳೂರು ನಗರಾಭಿವೃದ್ಧಿ, ಗೃಹ, ಇಂಧನ ಹಾಗೂ ಪ್ರಮುಖ ಇಲಾಖೆಗಳ ಹಂಚಿಕೆ ಕುರಿತಾಗಿ ಹಲವು ಸುತ್ತಿನ ಚರ್ಚೆಗಳು ನಡೆದಿದ್ದವು.


ಹಿರಿಯ ಸಚಿವರು ಮತ್ತು ಪ್ರಭಾವಿ ನಾಯಕರ ನಡುವಿನ ಸಮತೋಲನ ಕಾಯ್ದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನಿಸುತ್ತಿದ್ದರೂ, ಕೆಲವು ನಾಯಕರ ಅಸಮಾಧಾನ ಪಕ್ಷದೊಳಗೆ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.


 ರಾಜೀನಾಮೆ ಕುರಿತು ಅಧಿಕೃತ ಸ್ಪಷ್ಟನೆ ಇಲ್ಲ


ಆದರೆ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಕುರಿತು ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದರೆ ಕಾಂಗ್ರೆಸ್ ಮೂಲಗಳು ಕೂಡ ಈ ಬೆಳವಣಿಗೆಯನ್ನು ಸೂಚಿಸುತ್ತದೆ. ಆದಾಗ್ಯೂ, ಖಾತೆ ಹಂಚಿಕೆ ವಿಚಾರದಲ್ಲಿ ಅವರ ಅಸಮಾಧಾನವನ್ನು ಪಕ್ಷದ ನಾಯಕತ್ವ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ.


ಮುಂದಿನ ಕೆಲ ದಿನಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಅಸಮಾಧಾನಿತ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಸುವ ಸಾಧ್ಯತೆ ಇದೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆಗೆ ಹೆಚ್ಚಿನ ಮಹತ್ವ ದೊರೆತಿದ್ದು, ರಾಮಲಿಂಗಾ ರೆಡ್ಡಿ ಅವರ ಮುಂದಿನ ನಡೆ ಏನಾಗಲಿದೆ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Post a Comment

0 Comments

Post a Comment (0)
3/related/default