ಕೋರ್ಟ್ ವಿಚಾರಣೆಗೆ ಗೈರಾಗಿದ್ದ ಹಿನ್ನೆಲೆ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗಾರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು, ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಪೊಲೀಸರು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಪೊಲೀಸರು ಶಾಸಕ ಶರಣು ಸಲಗಾರ್ ಅವರನ್ನು ಬಂಧಿಸಲು ಮುಂದಾಗಿದ್ದಾರೆ. ನ್ಯಾಯಾಲಯದ ಆದೇಶದ ಅನ್ವಯ ಬಸವಕಲ್ಯಾಣದಲ್ಲಿರುವ ಅವರ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಿಪಿಐ ಅಲಿಸಾಬ್ ಹಾಗೂ ಪಿಎಸ್‌ಐ ಚಂದ್ರಶೇಖರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
ಪ್ರಕರಣದ ಹಿನ್ನೆಲೆ ಪರಿಶೀಲಿಸಿದರೆ, 2023ರ ಜುಲೈ 1ರಂದು ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಗೋಹತ್ಯೆ ನಡೆದಿದೆ ಎಂಬ ಆರೋಪದ ಮೇರೆಗೆ ಬಸವಕಲ್ಯಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಗೋಹತ್ಯೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ್ದ ಶರಣು ಸಲಗಾರ್ ಹಾಗೂ ಅವರ ಬೆಂಬಲಿಗರು ತಡೆಗಟ್ಟಲು ಯತ್ನಿಸಿದಾಗ ಗಲಾಟೆ ಉಂಟಾಗಿತ್ತು ಎಂದು ಆರೋಪಿಸಲಾಗಿದೆ.
ಈ ಘಟನೆಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಬಳಿಕ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ಪ್ರಕರಣದ ಸಾಕ್ಷ್ಯ ವಿಚಾರಣೆ ನಡೆಯಬೇಕಿದ್ದ ಸಂದರ್ಭದಲ್ಲಿ ಶಾಸಕ ಶರಣು ಸಲಗಾರ್ ನ್ಯಾಯಾಲಯಕ್ಕೆ ಹಾಜರಾಗದೆ ಗೈರಾಗಿದ್ದರು.
ನ್ಯಾಯಾಲಯದ ಸಮನ್ಸ್‌ಗೆ ಸ್ಪಂದಿಸದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಕಠಿಣ ನಿಲುವು ತಾಳಿದ್ದು, ಶರಣು ಸಲಗಾರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದಾರೆ. ಇದರೊಂದಿಗೆ ಪ್ರಕರಣ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.
ಇದೀಗ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕ್ರಮ ಕೈಗೊಂಡಿದ್ದಾರೆ. ಶರಣು ಸಲಗಾರ್ ಬಂಧನವಾಗುವ ಸಾಧ್ಯತೆ ಹೆಚ್ಚಿರುವುದರಿಂದ ಬಸವಕಲ್ಯಾಣ ಹಾಗೂ ಬೀದರ್ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದಿನ ವಿಚಾರಣೆ ಹಾಗೂ ಪೊಲೀಸ್ ಕ್ರಮಗಳು ಮಹತ್ವ ಪಡೆದುಕೊಂಡಿವೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

