ನಟಿ ಶುಭಾ ಪೂಂಜಾ ಹಾಗೂ ಉದ್ಯಮಿ ಸುಮಂತ್ ಬಿಲ್ಲವ ಅವರ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಈ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿರುವುದು ತಿಳಿದುಬಂದಿದೆ. ಈ ಬೆಳವಣಿಗೆ ಕನ್ನಡ ಚಿತ್ರರಂಗ ಹಾಗೂ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಚಂದನವನದ ಜನಪ್ರಿಯ ನಟಿ ಶುಭಾ ಪೂಂಜಾ ಅವರ ವೈಯಕ್ತಿಕ ಜೀವನದ ಕುರಿತು ಮಹತ್ವದ ಮಾಹಿತಿ ಬಹಿರಂಗವಾಗಿದ್ದು, ಅವರು ಹಾಗೂ ಅವರ ಪತಿ ಸುಮಂತ್ ಬಿಲ್ಲವ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕೌಟುಂಬಿಕ ನ್ಯಾಯಾಲಯದಲ್ಲಿ ಈಗಾಗಲೇ ಅರ್ಜಿ ದಾಖಲಾಗಿದ್ದು, ಕಾನೂನು ಪ್ರಕ್ರಿಯೆ ಮುಂದುವರಿಯುತ್ತಿದೆ ಎಂದು ಮೂಲಗಳು ತಿಳಿಸಿವೆ. ವರದಿ ಸುದ್ದಿ ಲೈವ್ ಡಾಟ್ ಕಾಮ್
ಶುಭಾ ಪೂಂಜಾ ಮತ್ತು ಉದ್ಯಮಿ ಸುಮಂತ್ ಬಿಲ್ಲವ ಅವರು 2022ರ ಜನವರಿಯಲ್ಲಿ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರ ವಿವಾಹ ಸಮಾರಂಭವು ಖಾಸಗಿಯಾಗಿ ನಡೆದಿದ್ದರೂ, ಮದುವೆಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದವು. ಮದುವೆಯ ಬಳಿಕ ಈ ಜೋಡಿ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಾಗೂ ಕೆಲವು ರಿಯಾಲಿಟಿ ಶೋಗಳಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡು ಗಮನ ಸೆಳೆದಿದ್ದರು.
ಆದರೆ ಕಳೆದ ಕೆಲವು ಸಮಯಗಳಿಂದ ದಂಪತಿಯ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿದ್ದವೆಯೇ ಎಂಬ ಪ್ರಶ್ನೆ ಈಗ ಮೂಡತೊಡಗಿದೆ. ವಿಚ್ಛೇದನದ ಅರ್ಜಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಇಬ್ಬರೂ ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ. ವರದಿ ಸುದ್ದಿ ಲೈವ್ ಡಾಟ್ ಕಾಮ್
ವಿಚ್ಛೇದನದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ನಟಿ ಶುಭಾ ಪೂಂಜಾ ನಿರಾಕರಿಸಿದ್ದಾರೆ. ಹಾಗೆಯೇ ಪತಿ ಸುಮಂತ್ ಬಿಲ್ಲವ ಕೂಡ ಈ ನಿರ್ಧಾರದ ಹಿಂದಿನ ಕಾರಣಗಳನ್ನು ಬಹಿರಂಗಪಡಿಸಲು ಇಚ್ಛಿಸಿಲ್ಲ. ಹೀಗಾಗಿ ದಂಪತಿ ಪ್ರತ್ಯೇಕವಾಗಲು ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.
ಶುಭಾ ಪೂಂಜಾ ಕನ್ನಡ ಚಿತ್ರರಂಗದಲ್ಲಿ ಹಲವು ಯಶಸ್ವಿ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಜಾಕ್‌ಪಾಟ್, ಚಂಡ, ಸ್ಲಮ್ ಬಾಲಾ, ಅಂಜದಿರು, ಥಾಕತ್, ನಾರಿ ಅಡ್ಡಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ತಮ್ಮ ಅಭಿನಯ ಹಾಗೂ ಗ್ಲಾಮರ್ ಮೂಲಕ ಪ್ರೇಕ್ಷಕರ ಮನಗೆದ್ದಿರುವ ಅವರು ಕನ್ನಡ ಕಿರುತೆರೆಯಲ್ಲಿಯೂ ಜನಪ್ರಿಯ ಮುಖವಾಗಿದ್ದಾರೆ. ವರದಿ ಸುದ್ದಿ ಲೈವ್ ಡಾಟ್ ಕಾಮ್
ಇದಲ್ಲದೆ, ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿಯಾಗಿ ಭಾಗವಹಿಸುವ ಮೂಲಕ ಶುಭಾ ಪೂಂಜಾ ಮತ್ತಷ್ಟು ಜನಪ್ರಿಯತೆ ಗಳಿಸಿದ್ದರು. ರಿಯಾಲಿಟಿ ಶೋಗಳ ಜೊತೆಗೆ ಹಲವು ಧಾರಾವಾಹಿಗಳಲ್ಲಿ ಅತಿಥಿ ಪಾತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ಇದೀಗ ಅವರ ವೈಯಕ್ತಿಕ ಜೀವನದ ಈ ಬೆಳವಣಿಗೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆ ಇದೆ.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️






