}

ಹೈಕಮಾಂಡ್ ಭೇಟಿಗೆ ತೆರಳಿದ್ದ ಶಾಸಕ ಕೆ. ಷಡಕ್ಷರಿ ಅಸ್ವಸ್ಥ: ಆರೋಗ್ಯ ಸ್ಥಿತಿ ಚಿಂತಾಜನಕ

suddilive.com
By -
0
Congress MLA K Shadakshari hospitalized in Delhi after sudden health complications and undergoing treatment in ICU

 ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ (K Shadakshari) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 


ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಶಾಸಕ ಷಡಕ್ಷರಿ ಅವರು ಈ ಕುರಿತು ಚರ್ಚಿಸಲು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೇಶದ ರಾಜಧಾನಿ ದೆಹಲಿಗೆ ತೆರಳಿದ್ದರು. ಆದರೆ ದೆಹಲಿಯಲ್ಲಿದ್ದಾಗಲೇ ಅವರಿಗೆ ಹಠಾತ್ ಆರೋಗ್ಯ ಸಮಸ್ಯೆ ಎದುರಾಗಿದೆ. ತಕ್ಷಣವೇ ಅವರನ್ನು ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ


ಸದ್ಯ ವೈದ್ಯರ ತಂಡ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದೆ. ಶಾಸಕರು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಅವರ ಕುಟುಂಬಸ್ಥರು ಹಾಗೂ ಬೆಂಬಲಿಗರಲ್ಲಿ ಆತಂಕ ಮೂಡಿದ್ದು, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.


About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default