ಉಡುಪಿ: ಕರಾವಳಿಯ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ, ಕಳೆದ ಮೂರು ವರ್ಷಗಳಿಂದ ಉಡುಪಿಯ ಎಂಜಿಎಂ ಕಾಲೇಜು ಬಳಿ ನಿರಂತರವಾಗಿ ಗ್ರಾಹಕರಿಗೆ ಅತ್ಯುತ್ತಮ ಆರ್ಥಿಕ ಸೇವೆಗಳನ್ನು ನೀಡುತ್ತಾ ಬಂದಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ಪ್ರ ಗತಿಯ ಹಾದಿಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ. ಸಂಸ್ಥೆಯ ನೂತನ ನಿರ್ದೇಶಕರಾಗಿ ಜಿಲ್ಲೆಯ ಪ್ರಸಿದ್ಧ ಮಾಧ್ಯಮ ಪ್ರಮುಖ ಹಾಗೂ ಸಾಂಸ್ಕೃತಿಕ ಸಂಘಟಕ ಸ್ಟೀವನ್ ಕುಲಾಸೊ ಉದ್ಯಾವರ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.
ವಿವಿಧ ಮಾಧ್ಯಮ ರಂಗಗಳಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಅಪಾರ ಅನುಭವ ಹೊಂದಿರುವ ಸ್ಟೀವನ್ ಕುಲಾಸೊ ಅವರು ಜಿಲ್ಲೆಯ ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯದಲ್ಲಿ ಅತ್ಯಂತ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಕರಾವಳಿಯ ಪ್ರಮುಖ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ಕಾರ್ಯನಿರೂಪಕರಾಗಿ (ಮಾಸ್ಟರ್ ಆಫ್ ಸೆರೆಮನಿ) ಚಿರಪರಿಚಿತರಾಗಿರುವ ಇವರು, ಕರಾವಳಿಯ ಹೆಮ್ಮೆಯ ಕಲಾ ಸಂಸ್ಥೆಯಾದ 'ನಿರಂತರ್ ಉದ್ಯಾವರ' ಇದರ ಸ್ಥಾಪಕರೂ ಆಗಿದ್ದಾರೆ. ಇವರ ಬಹುಮುಖ ಪ್ರತಿಭೆ, ಸಾರ್ವಜನಿಕ ಸಂಪರ್ಕ ಮತ್ತು ಸಾಂಸ್ಥಿಕ ನಾಯಕತ್ವದ ಅನುಭವವು ಸೊಸೈಟಿಯ ಮುಂದಿನ ವ್ಯವಹಾರಿಕ ವಿಸ್ತರಣೆ ಹಾಗೂ ಜನಪರ ಯೋಜನೆಗಳಿಗೆ ಹೊಸ ಶಕ್ತಿ ತುಂಬಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರಸ್ತುತ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಒಳಗೊಂಡಂತೆ ಒಟ್ಟು 11 ಜನ ನುರಿತ ನಿರ್ದೇಶಕರ ಬಲಿಷ್ಠ ಆಡಳಿತ ಮಂಡಳಿ ಕಾರ್ಯನಿರ್ವಹಿಸುತ್ತಿದೆ. ಇದೀಗ ನೂತನ ನಿರ್ದೇಶಕರ ಸೇರ್ಪಡೆಯೊಂದಿಗೆ ಗ್ರಾಹಕರಿಗೆ ಇನ್ನಷ್ಟು ಪಾರದರ್ಶಕ, ಸುಭದ್ರ ಹಾಗೂ ಅತ್ಯಾಧುನಿಕ ಸಹಕಾರಿ ಸೇವೆಗಳನ್ನು ಒದಗಿಸಲು ಆಡಳಿತ ಮಂಡಳಿ ಸಜ್ಜಾಗಿದೆ. ಮಾಧ್ಯಮ ಮತ್ತು ಸಾಮಾಜಿಕ ರಂಗದ ಅನುಭವ ಹೊಂದಿರುವ ನೂತನ ನಿರ್ದೇಶಕರ ನೇಮಕಾತಿಗೆ ಸಹಕಾರಿ ವಲಯ ಹಾಗೂ ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

