}

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ವೈರಲ್ ಆಗಿರುವ ಆಡಿಯೋ ನಕಲಿ: ಮಾಜಿ ಸಚಿವ ಜಮೀರ್ ಅಹಮದ್ ಸ್ಪಷ್ಟನೆ

suddilive.com
By -
0

 

Zameer Ahmed Khan addressing media over viral AI-generated audio controversy in Karnataka

ಬೆಂಗಳೂರು: ಕೆಲವು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹೆಸರಿನಲ್ಲಿ ಹರಿದಾಡುತ್ತಿರುವ ಆಡಿಯೋ ಸಂಪೂರ್ಣವಾಗಿ ನಕಲಿಯಾಗಿದ್ದು, ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.


ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ತಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಿ ದುರುದ್ದೇಶಪೂರ್ವಕವಾಗಿ ನಕಲಿ ಆಡಿಯೋ ಸೃಷ್ಟಿಸಿ ವೈರಲ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ಸಲ್ಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ವೈರಲ್ ಆಗಿರುವ ಆಡಿಯೋ ಕುರಿತು ಯಾವುದೇ ತನಿಖೆ ನಡೆಸಲು ತಾನು ಸಿದ್ಧನಿದ್ದೇನೆ ಎಂದು ತಿಳಿಸಿರುವ ಝಮೀರ್ ಅಹ್ಮದ್ ಖಾನ್, ಆ ಆಡಿಯೋದಲ್ಲಿರುವ ಧ್ವನಿ ತಮ್ಮದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡುವ ಉದ್ದೇಶದಿಂದ ಈ ರೀತಿಯ ಸುಳ್ಳು ಮಾಹಿತಿಯನ್ನು ಹರಿಬಿಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯವಾಗಿದ್ದು, ಜನರು ಇಂತಹ ಸುಳ್ಳು ಪ್ರಚಾರವನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.


ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ನಾಯಕತ್ವ ಬದಲಾವಣೆಯ ಬಳಿಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ. ಬುಧವಾರ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಮೊದಲ ಹಂತದಲ್ಲಿ ಹತ್ತು ಮಂದಿಗೆ ಸಚಿವ ಸಂಪುಟದಲ್ಲಿ ಅವಕಾಶ ದೊರೆಯುವ ಸಾಧ್ಯತೆ ಇದೆ. ಈ ಪಟ್ಟಿಯಲ್ಲಿ ಝಮೀರ್ ಅಹ್ಮದ್ ಖಾನ್ ಅವರ ಹೆಸರೂ ಪ್ರಮುಖವಾಗಿ ಕೇಳಿಬರುತ್ತಿದ್ದು, ಅವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.


ಈ ರಾಜಕೀಯ ಬೆಳವಣಿಗೆಗಳ ನಡುವೆಯೇ ಝಮೀರ್ ಅಹ್ಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಎಕ್ಸ್ (ಹಿಂದಿನ ಟ್ವಿಟರ್) ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಈ ಆಡಿಯೋ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ.


ವೈರಲ್ ಆಗಿರುವ ಆಡಿಯೋದಲ್ಲಿ ದಾವಣಗೆರೆಯ ಕಾಂಗ್ರೆಸ್ ಮುಖಂಡರೊಬ್ಬರೊಂದಿಗೆ ಝಮೀರ್ ಅಹ್ಮದ್ ಖಾನ್ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಸಂಭಾಷಣೆ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.


ಸದ್ಯ ಈ ಆಡಿಯೋ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಅದರ ನೈಜತೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ. ಆದರೆ, ಆಡಿಯೋ ಸಂಪೂರ್ಣವಾಗಿ ನಕಲಿಯಾಗಿದ್ದು, ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ ಎಂದು ಝಮೀರ್ ಅಹ್ಮದ್ ಖಾನ್ ಪುನರುಚ್ಚರಿಸಿದ್ದಾರೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default