ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ 'ಅಮುಕು ಡುಮುಕು' ಎಂಬ ಹೆಸರಿನಿಂದ ಪರಿಚಿತರಾಗಿರುವ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ವಿರುದ್ಧ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪೊಲೀಸರಿಗೆ ನೀಡಲಾದ ದೂರಿನ ಪ್ರಕಾರ, ಜುಲೈ 9ರ ರಾತ್ರಿ ಮಂಜು ಹಾಗೂ ಅವರ ಸ್ನೇಹಿತರು ನಗರದ ಖಾಸಗಿ ರೆಸ್ಟೋ ಬಾರ್‌ಗೆ ತೆರಳಿ ಊಟ ಮತ್ತು ಮದ್ಯ ಸೇವಿಸಿದ್ದರು. ಬಳಿಕ ಬಿಲ್ ಪಾವತಿಸುವ ವಿಚಾರದಲ್ಲಿ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಾರ್‌ನಿಂದ ಹೊರಡುವ ವೇಳೆ ಮಹಿಳಾ ಸಿಬ್ಬಂದಿ ಅವರನ್ನು ಪ್ರಶ್ನಿಸಿದಾಗ, ಮದ್ಯದ ಅಮಲಿನಲ್ಲಿದ್ದ ಮಂಜು ಸೆಲ್ಫಿ ಕೇಳುವ ನೆಪದಲ್ಲಿ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮಹಿಳೆಯ ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯ ಪದಗಳನ್ನು ಬಳಸಿ, "ನಿನ್ನ ರೇಟ್ ಎಷ್ಟು?" ಎಂದು ಅವಹೇಳನಕಾರಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಘಟನೆಯ ವೇಳೆ ಪರಿಸ್ಥಿತಿಯನ್ನು ಸಮಾಧಾನಪಡಿಸಲು ಮುಂದಾದ ಬಾರ್ ಮ್ಯಾನೇಜರ್ ಮೇಲೂ ಹಲ್ಲೆಗೆ ಯತ್ನಿಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯ ಬಳಿಕ ರೆಸ್ಟೋ ಬಾರ್ ಆಡಳಿತವು ಪೊಲೀಸ್ ಠಾಣೆಗೆ ದೂರು ಸಲ್ಲಿಸಿತ್ತು.
ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS)-2023ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯ ಮಾನಕ್ಕೆ ಧಕ್ಕೆ ಉಂಟುಮಾಡುವುದು, ಅಸಭ್ಯ ವರ್ತನೆ, ಬೆದರಿಕೆ ಹಾಗೂ ಹಲ್ಲೆಗೆ ಯತ್ನ ಸೇರಿದಂತೆ ಹಲವು ಆರೋಪಗಳನ್ನು ಪ್ರಕರಣದಲ್ಲಿ ಸೇರಿಸಲಾಗಿದೆ. ಈ ಸಂಬಂಧ ಸೆಕ್ಷನ್ 74, 75(1), 75(2), 75(3), 78, 79, 351(2), 352 ಹಾಗೂ 3(5) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಕರಣ ದಾಖಲಾದ ಬಳಿಕ ಮಂಜು ಅಲಿಯಾಸ್ ಅಮುಕು ಡುಮುಕು ಹಾಗೂ ಅವರೊಂದಿಗೆ ಇದ್ದ ಸ್ನೇಹಿತರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳು, ರೆಸ್ಟೋ ಬಾರ್ ಸಿಬ್ಬಂದಿಯ ಹೇಳಿಕೆಗಳು ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.
About the Author
Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.
📢 SUDDI LIVE WhatsApp Community
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.
📲 Join WhatsApp Community📢 SUDDI LIVE Facebook Page
ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.
👍 Follow SUDDI LIVEನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

