}

ಮಂಗಳೂರಿನಲ್ಲಿ ಬಾಂಗ್ಲಾದೇಶಿ ಪ್ರಜೆಗಳನ್ನು ಕೆಲಸಕ್ಕೆ ಕರೆತಂದ ಆರೋಪ: ಮೂವರ ವಿರುದ್ಧ ಪ್ರಕರಣ, ಇಬ್ಬರ ಬಂಧನ

suddilive.com
By -
0

ಮಂಗಳೂರು: ನಗರದಲ್ಲಿ ಕೆಲಸಕ್ಕೆ ಬಾಂಗ್ಲಾದೇಶಿ ಪ್ರಜೆಗಳನ್ನು ಅಕ್ರಮವಾಗಿ ಕರೆತಂದ ಆರೋಪದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಮಂಗಳೂರು ನಗರ ಪೊಲೀಸರು ಮಂಗಳವಾರ (ಜು. 14) ಪ್ರಕರಣ ದಾಖಲಿಸಿದ್ದಾರೆ.


ಪ್ರಕರಣದಲ್ಲಿ ಮೊಯ್ದಿನ್ ಇಸ್ಲಾಂ, ರಸೂಲ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಆರೋಪಿಗಳಾಗಿದ್ದಾರೆ. ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕರೆತಂದು ವಿವಿಧ ಕೆಲಸಗಳಿಗೆ ನಿಯೋಜಿಸುತ್ತಿದ್ದ ಆರೋಪಿಗಳು, ಅವರೊಂದಿಗೆ ಕೆಲ ಬಾಂಗ್ಲಾದೇಶಿ ಪ್ರಜೆಗಳನ್ನೂ ಅಕ್ರಮವಾಗಿ ಕರೆತಂದಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಪ್ರಕರಣ ಸಂಬಂಧ ಮೊಯ್ದಿನ್ ಇಸ್ಲಾಂ ಮತ್ತು ದಿಲ್ವಾರ್ ಹುಸೇನ್ ಅವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ರಸೂಲ್ ಇಸ್ಲಾಂನನ್ನು ಮಂಗಳೂರು ನಗರ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರ ಸಮನ್ವಯದಲ್ಲಿ ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.


ಆತನನ್ನು ಮಂಗಳೂರಿಗೆ ಕರೆತಂದು ವಿಚಾರಣೆಗೆ ಒಳಪಡಿಸಲು ನಗರ ಪೊಲೀಸ್ ತಂಡ ಈಗಾಗಲೇ ಕೋಲ್ಕತ್ತಾಕ್ಕೆ ತೆರಳಿದೆ. ರಸೂಲ್ ಇಸ್ಲಾಂನ ವಿಚಾರಣೆ ಬಳಿಕ ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ, ಅಕ್ರಮವಾಗಿ ಎಷ್ಟು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಕರೆತರಲಾಗಿದೆ ಹಾಗೂ ಇದರ ಹಿಂದೆ ಮತ್ತಷ್ಟು ಸಂಘಟಿತ ಜಾಲವಿದೆಯೇ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

About the Author

Prajwal is the Founder and Editor of Suddilive.com. He covers Karnataka news, politics, education, employment, sports, technology, and current affairs. He is committed to providing accurate, timely, and reliable information through responsible digital journalism.

📢 SUDDI LIVE WhatsApp Community

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE WhatsApp Community ಸೇರಿ.

📲 Join WhatsApp Community

📢 SUDDI LIVE Facebook Page

ತಾಜಾ ಸುದ್ದಿಗಳು, ಬ್ರೇಕಿಂಗ್ ನ್ಯೂಸ್, ರಾಜಕೀಯ, ಕ್ರೀಡೆ, ಮನರಂಜನೆ ಹಾಗೂ ಸ್ಥಳೀಯ ಸುದ್ದಿಗಳಿಗಾಗಿ SUDDI LIVE Facebook ಪೇಜ್ ಅನ್ನು Follow ಮಾಡಿ.

👍 Follow SUDDI LIVE

ನಿಮ್ಮ ಬೆಂಬಲವೇ ನಮ್ಮ ಶಕ್ತಿ ❤️

Tags:

Post a Comment

0 Comments

Post a Comment (0)
3/related/default